ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಸೋಂಕಿತರ ಸಂಖ್ಯೆ 15 ಲಕ್ಷದ ಹತ್ತಿರ ಬಂದಿದೆ. ಕಳೆದ 24 ಗಂಟೆಯಲ್ಲಿ ದೇಶದಾದ್ಯಂತ 47,703 ಜನರಲ್ಲಿ ಕೊರೊನಾ ಸೋಂಕಿರುವುದು ದೃಢವಾಗಿದೆ. 654 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದ ಒಟ್ಟಾರೆ ಸೋಂಕಿತರ ಸಂಖ್ಯೆ 14,83,157ಕ್ಕೆ ಹಾಗೂ ಹೆಮ್ಮಾರಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 33,425ಕ್ಕೆ ಏರಿಕೆ ಆಗಿದೆ.
ದೇಶದ ಒಟ್ಟು ಸೋಂಕಿತರ 14,83,157 ಪೈಕಿ 9,52,744 ಮಂದಿ ಇದುವರೆಗೆ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ 4,96,988 ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.








