ಚಿಕ್ಕೋಡಿ : ಕೊರೊನಾ ಸಂದರ್ಭದಲ್ಲಿ ಶ್ರಮಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಶ್ರಮಜೀವಿ. ಅವರಿಗೆ ಎಲ್ಲರೂ ಬೆಂಬಲ ನೀಡಬೇಕು ಎಂದು ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ.
ಹುಕ್ಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಒಂದು ವರ್ಷದಲ್ಲಿ ಸಿಎಂ ಯಡಿಯೂರಪ್ಪ ಅತ್ಯುತ್ತಮವಾಗಿ ಸರ್ಕಾರ ನಡೆಸಿದ್ದಾರೆ. ಅತಿವೃಷ್ಟಿ ಹಾಗೂ ಕೋವಿಡ್ ಸಂದರ್ಭದಲ್ಲೂ ಚೆನ್ನಾಗಿ ಆಡಳಿತ ನಡೆಸಿದ್ದಾರೆ ಎಂದು ಬಿಎಸ್ ವೈ ಪರ ಬ್ಯಾಟ್ ಬೀಸಿದರು.
ಇದೇ ವೇಳೆ ವಿಪಕ್ಷಗಳ ಆರೋಪಗಳ ಬಗ್ಗೆ ಮಾತನಾಡಿದ ಕತ್ತಿ, ವಿರೋಧ ಪಕ್ಷಗಳು ಅವ್ಯವಹಾರದ ಬಗ್ಗೆ ಸುಳ್ಳು ಆರೋಪ ಮಾಡುವುದನ್ನ ನಿಲ್ಲಿಸಬೇಕು. ಸಿದ್ದರಾಮಯ್ಯನವರು ಕೋವಿಡ್ ಸಂದರ್ಭದಲ್ಲಿ ಆರೋಪ ಮಾಡುವುದನ್ನ ಬಿಟ್ಟು ಸಹಕಾರ ನೀಡಬೇಕು ಎಂದು ಹೇಳಿದರು.


![pandavapura-free-health-camp-darshan-puttannaiah-october-8]](https://saakshatv.com/wp-content/uploads/2026/10/darsan-120x86.png)
![pandavapura-free-health-camp-darshan-puttannaiah-october-8]](https://saakshatv.com/wp-content/uploads/2026/10/darsan-350x250.png)


![technologies-aerospace-defense-manufacturing-unit-devanahalli]](https://saakshatv.com/wp-content/uploads/2026/10/areo-350x247.png)
