ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾಸುರನ ಅಬ್ಬರ ಜೋರಾಗಿದೆ. ದಿನದಿಂದ ದಿನಕ್ಕೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿದಿನ ಕೊರೊನಾ ಸ್ಫೋಟವಾಗುತ್ತಿದೆ. ಈ ಹಿನ್ನೆಲೆ ಗಣೇಶ ಹಬ್ಬದ ಆಚರಣೆಗೆ ಬಿಬಿಎಂಪಿ ಬ್ರೇಕ್ ಹಾಕಿದೆ.
ಈ ಕುರಿತು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮಾಹಿತಿ ನೀಡಿದ್ದು, ಈ ಬಾರಿ ನಗರದಲ್ಲಿ ಗಣೇಶ ಹಬ್ಬವನ್ನು ಸಾರ್ವಜನಿಕವಾಗಿ ಆಚರಿಸಲು ಅವಕಾಶ ಇಲ್ಲ. ಗಲ್ಲಿ ಗಲ್ಲಿಯಲ್ಲಿ ಗಣೇಶ ಕೂರಿಸುವುದಕ್ಕೆ ಅವಕಾಶವಿಲ್ಲ. ಗಣೇಶ ಹಬ್ಬವನ್ನು ಕೊರೊನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ಮನೆಯಲ್ಲೇ ಆಚರಿಸಲು ಮಾತ್ರವೇ ಅವಕಾಶ ನೀಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.








