ADVERTISEMENT
Monday, August 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೋವಿಡ್ ರೋಗಿಗಳಿಗೆ ತ್ವರಿತ ಮಾಹಿತಿ ನೀಡಲು ಕೇಂದ್ರೀಕೃತ ವ್ಯವಸ್ಥೆ..!

admin by admin
July 28, 2020
in Newsbeat, Samagra karnataka, ರಾಜ್ಯ
Dr. K. Sudhakar
Share on FacebookShare on TwitterShare on WhatsappShare on Telegram

ಬೆಂಗಳೂರು: ಕೋವಿಡ್ ಪಾಸಿಟಿವ್ ಆದ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಬೇಕೇ, ಮನೆ ಆರೈಕೆಗೆ ಒಳಪಡಬೇಕೆ ಅಥವಾ ಕೋವಿಡ್ ಕೇರ್ ಕೇಂದ್ರಕ್ಕೆ ದಾಖಲಾಗಬೇಕೆ ಎಂದು ಕೂಡಲೇ ನಿರ್ಧರಿಸಲು ಸಾಧ್ಯವಾಗುವಂತಹ ತಂತ್ರಜ್ಞಾನ ಆಧಾರಿತ ಕೇಂದ್ರೀಕೃತ ವ್ಯವಸ್ಥೆ ನಿರ್ಮಿಸಲು ನಿರ್ಧರಿಸಲಾಗಿದೆ.
ಹಿರಿಯ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ನಡೆಸಿದ ವೀಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಯಿತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಕೋವಿಡ್‍ಗೆ ಸಂಬಂಧಿಸಿದಂತೆ ಸರ್ಕಾರ ಬಳಸುತ್ತಿರುವ ಎಲ್ಲಾ ಆಪ್, ತಂತ್ರಜ್ಞಾನಗಳನ್ನು ಒಟ್ಟು ಮಾಡಿ ಕೇಂದ್ರೀಕೃತ ವ್ಯವಸ್ಥೆ ನಿರ್ಮಿಸುವುದರಿಂದ ಕೋವಿಡ್ ರೋಗಿಯು ಎಲ್ಲಿ ದಾಖಲಾಗಬೇಕು ಅಥವಾ ಯಾವ ರೀತಿಯ ಚಿಕಿತ್ಸೆಗೆ ಒಳಪಡಬೇಕು ಎಂಬುದನ್ನು ತಕ್ಷಣ ತೀರ್ಮಾನಿಸಬಹುದು. ಇದರಿಂದಾಗಿ ಚಿಕಿತ್ಸೆ ಪಡೆಯುವಲ್ಲಿನ ಗೊಂದಲ ನಿವಾರಣೆಯಾಗಲಿದೆ ಎಂದು ಸಚಿವರು ಸಭೆಗೆ ಸೂಚಿಸಿದರು.
ಸದ್ಯಕ್ಕೆ ಆಪ್ತಮಿತ್ರ ಸೇರಿದಂತೆ ಹಲವು ಆಪ್‍ಗಳು ಬಳಕೆಯಲ್ಲಿವೆ. ರಾಜ್ಯದಲ್ಲಿ ಕೋವಿಡ್ ಅಂಕಿ ಅಂಶವನ್ನು ನೀಡುವ ಡ್ಯಾಶ್ ಬೋರ್ಡ್ ಕೂಡ ಇದೆ. ಆದರೆ ಡ್ಯಾಶ್‍ಬೋರ್ಡ್‍ನಲ್ಲಿ ರಿಯಲ್ ಟೈಮ್‍ನಲ್ಲಿ ಮಾಹಿತಿ ದೊರೆಯುವಂತಾಗಬೇಕು. ಯಾವ ಆಸ್ಪತ್ರೆಯಲ್ಲಿ ಎಷ್ಟು ಹಾಸಿಗೆ ಖಾಲಿ ಇದೆ, ಪ್ರತಿ ಆಸ್ಪತ್ರೆಯಲ್ಲಿರುವ ಕೋವಿಡ್ ಮತ್ತು ನಾನ್ ಕೋವಿಡ್ ರೋಗಿಗಳೆಷ್ಟು ಎಂಬುದು ಡ್ಯಾಶ್ ಬೋರ್ಡ್‍ನಲ್ಲಿ ತಿಳಿಯುವಂತಾಗಬೇಕು. ಕೋವಿಡ್ ಖಚಿತಪಟ್ಟ ನಂತರ ವ್ಯಕ್ತಿಯು ದೂರವಾಣಿ ಕರೆ ಮಾಡಿದ ಕೂಡಲೇ ಆಸ್ಪತ್ರೆ ಅಥವಾ ಕೋವಿಡ್ ಕೇರ್ ಕೇಂದ್ರಕ್ಕೆ ದಾಖಲಾಗುವಂತೆ ಸಹಾಯ ದೊರೆಯಬೇಕು. ಇಂತಹ ಕೇಂದ್ರೀಕೃತ ವ್ಯವಸ್ಥೆಯನ್ನು ರಾಜ್ಯದಲ್ಲಿ ತರಬೇಕು ಎಂದು ಸೂಚಿಸಿದರು.
ದೆಹಲಿ ಮತ್ತು ಮಧ್ಯಪ್ರದೇಶದಲ್ಲಿ ಸ್ಟೆಪ್-1 ಎಂಬ ಸಂಸ್ಥೆ ಯಶಸ್ವಿಯಾಗಿ ಸೇವೆ ನೀಡುತ್ತಿದೆ. ಈ ಸಂಸ್ಥೆ ತನ್ನದೇ ಆದ ವೈದ್ಯ, ನರ್ಸ್ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಯನ್ನು ಹೊಂದಿದ್ದು, ಕೋವಿಡ್ ರೋಗಿಗಳಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಲಭ್ಯವಾಗುವಂತೆ ಮಾಡುತ್ತಿದೆ. ಈ ಸಂಸ್ಥೆಯಿಂದ ಮಾಹಿತಿ ಪಡೆದುಕೊಂಡು ಆ ಮಾದರಿಯನ್ನು ಕೂಡ ರಾಜ್ಯದಲ್ಲಿ ಅನುಷ್ಠಾನಕ್ಕೆ ತರಬಹುದು ಎಂದು ಸಚಿವ ಡಾ.ಕೆ.ಸುಧಾಕರ್ ಸೂಚಿಸಿದರು.

ಸಭೆಯ ಪ್ರಮುಖ ಅಂಶಗಳು..
1.ಕೊರೊನಾ ರೋಗಿಯ ರೋಗದ ಗಂಭೀರತೆಯನ್ನು ನಿರ್ಧರಿಸಿ ಆತನನ್ನು ಕೋವಿಡ್ ಆರೈಕೆ ಕೇಂದ್ರ ಅಥವಾ ಆಸ್ಪತ್ರೆಗೆ ದಾಖಲಿಸಲಾಗುತ್ತದೆ. ಲಕ್ಷಣ ರಹಿತ ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಬಾರದು ಎಂದು ಖಾಸಗಿ ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ.
2. ಕೊರೊನಾ ರೋಗಿಯ ರೋಗದ ಗಂಭೀರತೆಯನ್ನು ಅರಿತು ಅವರನ್ನು ಕೋವಿಡ್ ಆರೈಕೆ ಕೇಂದ್ರ ಅಥವಾ ಆಸ್ಪತ್ರೆಗೆ ದಾಖಲಿಸಲಾಗುವುದು. ರೋಗಿಯನ್ನು ಗೂಗಲ್ ಮ್ಯಾಪ್ ಸಹಾಯದಿಂದಲೇ ಪತ್ತೆ ಮಾಡಿ ಅವರಿರುವಲ್ಲಿಗೆ ವೈದ್ಯರನ್ನು ಕಳುಹಿಸಿ ರೋಗದ ಗಂಭೀರತೆಯನ್ನು ಪರೀಕ್ಷಿಸಲಾಗುವುದು. ನಂತರ ವೈದ್ಯರು ಅವರನ್ನು ಆಸ್ಪತ್ರೆ ಅಥವಾ ಆರೈಕೆ ಕೇಂದ್ರಕ್ಕೆ ದಾಖಲಿಸುವ ಕುರಿತು ನಿರ್ಧರಿಸುತ್ತಾರೆ. ಹೊಸ ಕೇಂದ್ರೀಕೃತ ವ್ಯವಸ್ಥೆಯು ಇದನ್ನು ಒಳಗೊಳ್ಳಲಿದೆ.
3. ಬೇರೆ ಜಿಲ್ಲೆಗಳಲ್ಲಿ ಕೊರೊನಾ ಪರೀಕ್ಷೆ ಸಂಖ್ಯೆ ಹೆಚ್ಚಿದೆ. ಆದರೆ ಬೆಂಗಳೂರಿನಲ್ಲಿ ಪರೀಕ್ಷೆ ಸಂಖ್ಯೆ ಕಡಿಮೆಯಾಗುತ್ತಿದೆ. ಪರೀಕ್ಷೆ ಸಂಖ್ಯೆ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು.

Related posts

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

August 31, 2026
ಮೋದಿ ಸರ್ಕಾರದಲ್ಲಿ ಶಿಕ್ಷಣಕ್ಕೆ ಆದ್ಯತೆ ಇಲ್ಲ: ಸ್ವಪಕ್ಷದ ವಿರುದ್ಧ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ವಾಗ್ದಾಳಿ

ಮೋದಿ ಸರ್ಕಾರದಲ್ಲಿ ಶಿಕ್ಷಣಕ್ಕೆ ಆದ್ಯತೆ ಇಲ್ಲ: ಸ್ವಪಕ್ಷದ ವಿರುದ್ಧ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ವಾಗ್ದಾಳಿ

August 31, 2026

ನಿಯಮಗಳ ಕಟ್ಟನಿಟ್ಟು ಪಾಲನೆಗೆ ಸೂಚನೆ
ಖಾಸಗಿ ವೈದ್ಯಕೀಯ ಮೆಡಿಕಲ್ ಕಾಲೇಜುಗಳ ಮುಖ್ಯಸ್ಥರೊಂದಿಗೆ ಸಚಿವ ಡಾ.ಕೆ.ಸುಧಾಕರ್ ಸಭೆ ನಡೆಸಿದರು.
ಪ್ರತಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಮೀಸಲಿಡುವ ಸಂಬಂಧ ಇರುವ ನಿಯಮಗಳನ್ನು ಪಾಲಿಸಬೇಕು. ಲಕ್ಷಣ ರಹಿತ ರೋಗಿಗಳನ್ನು (ಎ ಸಿಂಪ್ಟಮೆಟಿಕ್) ಆಸ್ಪತ್ರೆಗೆ ಸೇರಿಸದಿರಲು ಕ್ರಮ ವಹಿಸಬೇಕು ಎಂದು ಸಚಿವರು ಸೂಚಿಸಿದರು.

Tags: CoronaDr. K Sudhakartechnology-centered system
ShareTweetSendShare
Join us on:

Related Posts

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

by Shwetha
August 31, 2026
0

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕ ಪ್ರವಾಸದ ವೇಳೆ ಹಿಂದುತ್ವ ಮತ್ತು ಮುಸ್ಲಿಮರ ಕುರಿತು ಅತ್ಯಂತ ಮಹತ್ವದ ಹಾಗೂ ಸ್ಫೋಟಕ ಹೇಳಿಕೆ...

ಮೋದಿ ಸರ್ಕಾರದಲ್ಲಿ ಶಿಕ್ಷಣಕ್ಕೆ ಆದ್ಯತೆ ಇಲ್ಲ: ಸ್ವಪಕ್ಷದ ವಿರುದ್ಧ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ವಾಗ್ದಾಳಿ

ಮೋದಿ ಸರ್ಕಾರದಲ್ಲಿ ಶಿಕ್ಷಣಕ್ಕೆ ಆದ್ಯತೆ ಇಲ್ಲ: ಸ್ವಪಕ್ಷದ ವಿರುದ್ಧ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ವಾಗ್ದಾಳಿ

by Shwetha
August 31, 2026
0

ನವದೆಹಲಿ: ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಮುರಳಿ ಮನೋಹರ್ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ...

ಕುಟುಂಬ ರಾಜಕಾರಣದ ವಿರುದ್ಧ ಗುಡುಗಿದ ಈಶ್ವರಪ್ಪ:ಬಿಜೆಪಿ ನಾಯಕರ ನಿದ್ದೆಗೆಡಿಸಿದ ಈಶ್ವರಪ್ಪ ನಡೆ-ಚುನಾವಣಾ ಕಣಕ್ಕೆ ತಂದೆ ಅಥವಾ ಮಗನ ಎಂಟ್ರಿ ಫಿಕ್ಸ್!

ಕುಟುಂಬ ರಾಜಕಾರಣದ ವಿರುದ್ಧ ಗುಡುಗಿದ ಈಶ್ವರಪ್ಪ:ಬಿಜೆಪಿ ನಾಯಕರ ನಿದ್ದೆಗೆಡಿಸಿದ ಈಶ್ವರಪ್ಪ ನಡೆ-ಚುನಾವಣಾ ಕಣಕ್ಕೆ ತಂದೆ ಅಥವಾ ಮಗನ ಎಂಟ್ರಿ ಫಿಕ್ಸ್!

by Shwetha
August 31, 2026
0

ಶಿವಮೊಗ್ಗ: ಕರ್ನಾಟಕ ರಾಜಕಾರಣದ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಮತ್ತೊಮ್ಮೆ ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದ್ದಾರೆ. 2028ರ ವಿಧಾನಸಭಾ ಚುನಾವಣೆಯ ಕುರಿತು ಮಹತ್ವದ ಘೋಷಣೆ ಮಾಡಿರುವ ಅವರು,...

ಆತ್ಮಸಾಕ್ಷಿ ಮಾರಿಕೊಂಡವರ ಪಟ್ಟಿ ನನ್ನ ಬಳಿ ಇದೆ : ದ್ರೋಹಿಗಳ ಮುಖವಾಡ ಕಳಚಲು ಇದೊಂದು ಪರೀಕ್ಷೆ; ಅಡ್ಡ ಮತದಾನ ಮಾಡಿದವರ ವಿರುದ್ಧ ಎಚ್ ಡಿ ಕೆ ಆಕ್ರೋಶ

ದಿನಕ್ಕೊಂದು ಸುದ್ದಿ ಕೊಡ್ತೀನಿ ಆಗ ನಾನೇನು ಅಂತ ಗೊತ್ತಾಗುತ್ತೆ:ಅಮೆರಿಕದಿಂದ ಮರಳಿದ ಮೇಲೆ ದೇಶವೇ ಅಲ್ಲೋಲ ಕಲ್ಲೋಲ ಆಗುವ ಸುದ್ದಿ ಹೇಳುತ್ತೇನೆ-ಕುಮಾರಸ್ವಾಮಿ ಹೇಳಿಕೆಯಿಂದ ಬೆಚ್ಚಿಬಿದ್ದ ರಾಜ್ಯ ನಾಯಕರು!

by Shwetha
August 31, 2026
0

ಬೆಂಗಳೂರು: ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸುವಂತಹ ಸ್ಫೋಟಕ ಹೇಳಿಕೆಯೊಂದನ್ನು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನೀಡಿದ್ದಾರೆ. ಅಮೆರಿಕದಲ್ಲಿ ನಡೆಯಲಿರುವ ಅಕ್ಕ ಸಮ್ಮೇಳನದಲ್ಲಿ...

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

ಕುಮಾರಸ್ವಾಮಿ ತಮ್ಮ ಹೆಂಡ್ತಿಯ ಫೋನನ್ನೇ ಟ್ಯಾಪ್‌ ಮಾಡಿಸಿದ್ದರು!:ಸ್ವಂತ ಮಗನ ಏಳಿಗೆ ಸಹಿಸದ ತಂದೆ ಕುಮಾರಣ್ಣ!;ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ ಕುಮಾರಣ್ಣ- ನಾಚಿಕೆ ಆಗಲ್ವಾ ಎಂದು ಪ್ರಶ್ನಿಸಿದ ಸಚಿವ ಹೆಚ್ ಸಿ ಬಾಲಕೃಷ್ಣ

by Shwetha
August 31, 2026
0

ಬೆಂಗಳೂರು: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮತ್ತು ಪೌರಾಡಳಿತ ಸಚಿವ ಹೆಚ್ ಸಿ ಬಾಲಕೃಷ್ಣ ನಡುವಿನ ರಾಜಕೀಯ ಜಟಾಪಟಿ ಈಗ ಅತ್ಯಂತ ವೈಯಕ್ತಿಕ ಮತ್ತು ಸ್ಫೋಟಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram