ಬೆಂಗಳೂರು: ಇಂದು ಮತ್ತು ನಾಳೆ ವೃತ್ತಿಪರ ಕೋರ್ಸ್‍ಗಳಿಗೆ ಸಿಇಟಿ(ಸಾಮಾನ್ಯ ಪ್ರವೇಶ) ಪರೀಕ್ಷೆ ನಡೆಯಲಿದೆ. ಒಟ್ಟು 1.94 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ
ಇಂದು ಬೆಳಿಗ್ಗೆ ಜೀವಶಾಸ್ತ್ರ ಹಾಗೂ ಮಧ್ಯಾಹ್ನ ಗಣಿತ ವಿಷಯದ ಪರೀಕ್ಷೆ ನಡೆಯಲಿದೆ. ನಾಳೆ ಭೌತಶಾಸ್ತ್ರ, ರಸಾಯನ ಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದೆ. ಆಗಸ್ಟ್ 1ರಂದು ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.
40 ಮಂದಿ ಕೊರೊನಾ ಸೋಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಕೊರೊನಾ ಸೋಂಕಿತ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆದೊಯ್ಯಲು ಪ್ರತ್ಯೇಕ ವಾಹನದ ವ್ಯವಸ್ಥೆ ಮಾಡಲಾಗಿದೆ. ಜತೆಗೆ ಅವರಿಗೆ ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ಈ ಕೊಠಡಿಗಳ ಮೇಲ್ವಿಚಾರಣೆ ಮಾಡುವ ಸಿಬ್ಬಂದಿಗಳು ಪಿಪಿಇ ಕಿಟ್ ಧರಿಸಲು ಸೂಚನೆ ನೀಡಲಾಗಿದೆ.
ಕಂಟೈನ್‍ಮೆಂಟ್ ಪ್ರದೇಶದ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ತೆರಳಲು ಸರ್ಕಾರ ಬಸ್ ವ್ಯವಸ್ಥೆ ಮಾಡಿದೆ. ಒಬ್ಬ ಪೋಷಕರ ಜತೆ ವಿದ್ಯಾರ್ಥಿಗಳು ತೆರಳಬಹುದು. ಸಿಇಟಿ ಪರೀಕ್ಷೆಯ ಹಾಲ್ ಟಿಕೆಟ್ ತೋರಿಸಿದರೆ ಸಾಕು, ಪೊಲೀಸರು ಅವರನ್ನು ತಡೆಯುವುದಿಲ್ಲ.
ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸರ್ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ
ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ
ಬೆಂಗಳೂರಿನ ಎಮ್. ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದೆ. ಸ್ಟೇಡಿಯಂ...








