ಮಂಗಳೂರು : ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿರುವ ಡಿ.ಕೆ ಶಿವಕುಮಾರ್ ಅವರು, ವಿಮಾನ ನಿಲ್ದಾಣದಿಂದ ನೇರವಾಗಿ ಕೇಂದ್ರ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಮನೆಗೆ ಭೇಟಿ ನೀಡಿದರು.
ಇಂದು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಡಿಕೆಶಿವಕುಮಾರ್ ಅವರನ್ನು ಜಿಲ್ಲಾ ಕಾಂಗ್ರೆಸ್ ನಾಯಕರು ಸ್ವಾಗತಿಸಿದರು. ಬಳಿಕ ಡಿಕೆಶಿ ನೇರವಾಗಿ ಆಸ್ಕರ್ ಫರ್ನಾಂಡಿಸ್ ಮನೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿ ಕೆಲ ಹೊತ್ತು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು.
ಈ ವೇಳೆ ಆಸ್ಕರ್ ಫರ್ನಾಂಡಿಸ್ ಪತ್ನಿ ಬ್ಲೋಸಂ ಫರ್ನಾಂಡಿಸ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಜೊತೆಗಿದ್ದರು.