ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ನಾಳೆ ಸಂಜೆ 4.30ಕ್ಕೆ ಮಹತ್ವದ ಭಾಷಣ ಮಾಡಲಿದ್ದಾರೆ. ಪ್ರಧಾನಿಗಳು ತಮ್ಮ ಭಾಷಣದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದ್ದು, ಈ ಕುರಿತು ಮಾತನಾಡಲಿದ್ದಾರೆ ಎಂದು ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ತಿಳಿಸಿದೆ. ಅಲ್ಲದೇ ಕೊರೊನಾ ಅನ್ ಲಾಕ್ 3.0 ನಾಳೆಯಿಂದ ಜಾರಿ ಆಗಲಿದೆ. ಈ ವೇಳೆಯಲ್ಲೇ ಪ್ರಧಾನಿಗಳು ಭಾಷಣ ಮಾಡುತ್ತಿರುವುದು ಸಾಕಷ್ಟು ಪ್ರಾಮುಖ್ಯತೆ ಪಡೆದುಕೊಂಡಿದೆ.
ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣದ ಮಾಧ್ಯಮವಾಗಬೇಕು ಎಂಬುವುದು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಮುಖ ಉದ್ದೇಶವಾಗಿದ್ದು, ಹಲವು ರಾಜ್ಯಗಳು ಹೊಸ ನೀತಿಯನ್ನು ಸ್ವಾಗತಿಸಿವೆ. ಬರೋಬ್ಬರಿ 34 ವರ್ಷಗಳ ಬಳಿಕ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.