ಕಾರವಾರ : ಕೋವಿಡ್ ಹೆಸರಲ್ಲಿ ರಾಜ್ಯ ಸರ್ಕಾರ ಭ್ರಷ್ಟಾಚಾರ ಮಾಡುತ್ತಿದೆ. ಬಿಜೆಪಿಯವರು ಹೆಣದ ಮೇಲೆ ಹಣ ಮಾಡುವವರು. ಶವದ ಮೇಲೆ ಕುಳಿತು ಊಟ ಮಾಡುವವರು ಎಂದು ಕಾಂಗ್ರೆಸ್ ಎಂಎಲ್ ಸಿ ಬಿ.ಕೆ.ಹರಿಪ್ರಸಾದ್ ಕಿಡಿಕಾರಿದ್ದಾರೆ.
ಕಾರವಾರದದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಬಿಜೆಪಿ ನಾಯಕರಿಗೆ ಯಾವುದೇ ನಾಚಿಕೆ, ಮಾನಮರ್ಯಾದೆ ಇಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜ್ಯ ಸರ್ಕಾರ ಇಂಥ ಕೊರೊನಾ ಸಾಂಕ್ರಾಮಿಕ ರೋಗದ ಸಂದರ್ಭದಲ್ಲೂ ಹಗರಣದಲ್ಲಿ ಸಿಕ್ಕಿ ಹಾಕಿಕೊಂಡಿದೆ. ಇದು ಕಾಂಗ್ರೆಸ್ ಪಕ್ಷದ ಆರೋಪವಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಿ ಹೈಕೋರ್ಟ್ ನ್ಯಾಯಾದೀಶರಿಂದ ತನಿಖೆ ಮಾಡಬೇಕು. ಭ್ರಷ್ಟಾಚಾರ ಮಾಡಿದವರು ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಹರಿಪ್ರಸಾದ್, ಕೊರೊನಾ ಸಂದರ್ಭದಲ್ಲಿ ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸಿಲ್ಲ ಎಂದು ಹೈಕೋರ್ಟ್ ಚಾಟಿ ಬೀಸಿದ ಬಳಿಕ ಸರ್ಕಾರ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಯ ಆಯುಕ್ತರನ್ನು ಬದಲಿಸಿದೆ ಎಂದು ಕಿಡಿಕಾರಿದರು.