ಬೆಂಗಳೂರು : ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಇಂದಿನ ಅಧಿವೇಶನದಲ್ಲಿ ರಾಜ್ಯ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಕಾಂಗ್ರೆಸ್ ಪ್ಲಾನ್ ಮಾಡಿದೆ. ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್ ದೊರೆಸ್ವಾಮಿ ಅವರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿವಾದಾತ್ಮಕ ಹೇಳಿಕೆ. ಸಿಎಎ ಪ್ರತಿಭಟನೆ, ಮಂಗಳೂರು ಗೋಲಿಬಾರ್ ಪ್ರಕರಣಗಳನ್ನು ಅಸ್ತ್ರವಾಗಿ ಬಳಸಿಕೊಳ್ಳಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಅಲ್ಲದೆ ಶಾಸಕ ಯತ್ನಾಳ್ ತಮ್ಮ ಹೇಳಿಕೆಗೆ ಬಹಿರಂಗ ಕ್ಷಮೆ ಯಾಚಿಸುವಂತೆ ಕಾಂಗ್ರೆಸ್ ನಾಯಕರು ಇಂದು ಪಟ್ಟು ಹಿಡಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬಜೆಟ್ ಅಧಿವೇಶನಕ್ಕೂ ಮುನ್ನ ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.
8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ
ಸದಾ ನಗುಮುಖದಿಂದಲೇ ಎಲ್ಲರ ಮನಸ್ಸು ಗೆದ್ದಿರುವ ರಶ್ಮಿಕಾ ಮಂದಣ್ಣ ಇದೀಗ ತೀವ್ರವಾಗಿ ಗರಂ ಆಗಿದ್ದಾರೆ. ಸಿನಿಮಾ ರಂಗಕ್ಕೆ ಕಾಲಿಟ್ಟಾಗಿನಿಂದಲೂ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್, ನೆಗೆಟಿವ್ ಕಮೆಂಟ್...








