ADVERTISEMENT
Saturday, February 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಮಗನ ಸ್ಮರಣಾರ್ಥ 61 ಕೇರಳಿಗರ ಟಿಕೆಟ್‌ಗಳನ್ನು ಪ್ರಾಯೋಜಿಸಿದ ದುಬೈನ ಅನಿವಾಸಿ ಭಾರತೀಯ

admin by admin
August 2, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಮಗನ ಸ್ಮರಣಾರ್ಥ 61 ಕೇರಳಿಗರ ಟಿಕೆಟ್‌ಗಳನ್ನು ಪ್ರಾಯೋಜಿಸಿದ ದುಬೈನ ಅನಿವಾಸಿ ಭಾರತೀಯ

ದುಬೈ, ಅಗಸ್ಟ್ 2: ಕಳೆದ ವರ್ಷ ಕಾರು ಅಪಘಾತದಲ್ಲಿ ಮೃತಪಟ್ಟ ತನ್ನ ದಿವಂಗತ ಮಗನ ಸ್ಮರಣಾರ್ಥ ದುಬೈ ಮೂಲದ ಅನಿವಾಸಿ ಭಾರತೀಯ ಟಿ.ಎನ್.ಕೃಷ್ಣಕುಮಾರ್ ಕೋವಿಡ್ -19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಯುಎಇಯಲ್ಲಿ ಸಿಲುಕಿದ್ದ 61 ಕೇರಳಿಗರ ಟಿಕೆಟ್‌ಗಳನ್ನು ಪ್ರಾಯೋಜಿಸಿದ್ದಾರೆ.

Related posts

Those who say they have no peace of mind in life, read this story and you will know where to find peace.

ಜೀವನದಲ್ಲಿ ಮನಸ್ಸಿಗೆ ಶಾಂತಿ ಇಲ್ಲ ಎಂದು ಹೇಳುವವರು ಈ ಕಥೆಯನ್ನು ಓದಿ, ಶಾಂತಿ ಎಲ್ಲಿ ಸಿಗುತ್ತದೆ ಎಂದು ನಿಮಗೆ ತಿಳಿಯುತ್ತದೆ.

February 14, 2026
india vs pakistan

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026

ಇವರು ತುಂಬಾ ಕಷ್ಟದಲ್ಲಿ ಸಿಲುಕಿದ್ದ ಜನರು. ಅವರಲ್ಲಿ ಹೆಚ್ಚಿನವರು, ಮನೆಗೆ ಮರಳಲು ಯಾವುದೇ ಆರ್ಥಿಕ ಶಕ್ತಿಯಿಲ್ಲದೆ ಉದ್ಯೋಗ ಕಳೆದುಕೊಂಡಿದ್ದಾರೆ. ಅವರು ಮನೆಗೆ ಹೋಗಿ ಅವರ ಕುಟುಂಬದವರ ಜೊತೆ ಇರಬೇಕೆಂದು ನಾನು ಬಯಸುತ್ತೇನೆ ಎಂದು ಕಳೆದ 32 ವರ್ಷಗಳಿಂದ ದುಬೈನಲ್ಲಿ ನೆಲೆಸಿರುವ ಕೃಷ್ಣಕುಮಾರ್ ಅವರು ಹೇಳಿದ್ದಾರೆ.


1988 ರಲ್ಲಿ ತಿರುವನಂತಪುರಂ ಎಂಜಿನಿಯರಿಂಗ್ ಕಾಲೇಜಿನಿಂದ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಪದವೀಧರರಾದ ಕೃಷ್ಣಕುಮಾರ್ ಅವರು ಕೇರಳದ ವಿಜ್ಞಾನ ಮತ್ತು ಕಲಾ ಕಾಲೇಜಿನ ಹಳೆಯ ವಿದ್ಯಾರ್ಥಿಗಳನ್ನು ಒಳಗೊಂಡ ಯುಎಇಯಲ್ಲಿ ಸ್ಥಾಪಿಸಲಾದ ಸ್ವಯಂಸೇವಕ ಗುಂಪಿನ ಆಲ್ ಕೇರಳ ಕಾಲೇಜು ಅಲುಮ್ನಿ ಫ್ರಂಟ್ (ಎಕೆಸಿಎಎಫ್) ನ ಸಕ್ರಿಯ ಸದಸ್ಯರಾಗಿದ್ದಾರೆ.
53 ರ ಹರೆಯದವರಾದ ಅವರು ಕೋವಿಡ್-19 ಸಂದರ್ಭದಲ್ಲಿ ಎಕೆಸಿಎಎಫ್ ವತಿಯಿಂದ ಕಾರ್ಮಿಕ ಶಿಬಿರಗಳಲ್ಲಿರುವವರಿಗೆ ಇಫ್ತಾರ್ ಸಮಯದಲ್ಲಿ ಆಹಾರ ಕಿಟ್‌ಗಳನ್ನು ವಿತರಿಸುವುದು, 2018 ರಲ್ಲಿ ಕೇರಳ ಕಂಡ ಶತಮಾನದ ಅತಿದೊಡ್ಡ ಪ್ರವಾಹದ ಸಮಯದಲ್ಲಿ ಸಹಾಯಹಸ್ತ ಚಾಚಿದ್ದರು.

ಹಾಗಾಗಿ, ಆರ್ಥಿಕವಾಗಿ ದುರ್ಬಲವಾಗಿರುವ ಕೇರಳಿಗರನ್ನು ವಾಪಸ್ ಕಳುಹಿಸಲು ಚಾರ್ಟರ್ ಫ್ಲೈಟ್‌ಗಳ ವಿಷಯ ಬಂದಾಗ, ಕೃಷ್ಣಕುಮಾರ್ ಹೆಜ್ಜೆ ಹಾಕಿದರು. ಅವರು ಆರಂಭದಲ್ಲಿ ಪ್ರತ್ಯೇಕ ವಿಮಾನಗಳಲ್ಲಿ ಆರು ವ್ಯಕ್ತಿಗಳಿಗೆ ಟಿಕೆಟ್ ಪ್ರಾಯೋಜಿಸಲು ಯೋಚಿಸಿದರು. ಬಳಿಕ, ಎಕೆಸಿಎಎಫ್ 191 ಪ್ರಯಾಣಿಕರಿಗೆ ಪೂರ್ಣ ವಿಮಾನ ಹಾರಾಟ ಮಾಡಲು ನಿರ್ಧರಿಸಿದಾಗ, ಅವರಲ್ಲಿ 55 ಜನರಿಗೆ ಟಿಕೆಟ್ ಪ್ರಾಯೋಜಿಸಲು ಒಪ್ಪಿಕೊಂಡರು. ಜುಲೈ 25 ರಂದು, 191 ಪ್ರಯಾಣಿಕರನ್ನು ಹೊತ್ತ  ದುಬೈ ವಿಮಾನವು ದುಬೈನಿಂದ ಹೊರಟಿತು, ಕೆಲವು ಗಂಟೆಗಳ ನಂತರ ಸುರಕ್ಷಿತವಾಗಿ ಕೊಚ್ಚಿಗೆ ಇಳಿಯಿತು. ಕಾರ್ಪೊರೇಟ್ ಸಂಸ್ಥೆಯೊಂದರಲ್ಲಿ ಮಾರಾಟ ಮತ್ತು ಮಾರುಕಟ್ಟೆ ನಿರ್ದೇಶಕರಾಗಿ ಉದ್ಯೋಗದಲ್ಲಿರುವ ಕೃಷ್ಣಕುಮಾರ್ ಅವರು ತಮ್ಮ ಕೊಡುಗೆಗಳನ್ನು ‘ಸಾಮೂಹಿಕ ಪ್ರಯತ್ನದ’ ಒಂದು ಭಾಗವೆಂದು ಕರೆಯುತ್ತಾರೆ.

‘ಇದು ಸಾಮೂಹಿಕ ಪ್ರಯತ್ನವಾಗಿತ್ತು. ಪ್ರತಿಯೊಬ್ಬರೂ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡಿದರು. ಆ ದಿನ ಮನೆಗೆ ವಾಪಸಾಗಿದ್ದ ಜನರು ಹೆಚ್ಚಾಗಿ ಉದ್ಯೋಗ ಕಳೆದುಕೊಂಡವರು ಮತ್ತು ವೈದ್ಯಕೀಯ ತುರ್ತುಸ್ಥಿತಿ ಹೊಂದಿದವರು. ನೀವು ಏನೇ ಹೇಳಿದರೂ ಕೇರಳ ನಮ್ಮೆಲ್ಲರಿಗೂ ನೆಲೆಯಾಗಿದೆ ಮತ್ತು ಅವರು ಮನೆಗೆ ಹೋಗಲು ಅರ್ಹರು ಎಂದು ಕೃಷ್ಣಕುಮಾರ್ ಹೇಳಿದರು.
ತಮ್ಮ ಎಂಜಿನಿಯರಿಂಗ್ ದಿನಗಳಲ್ಲಿ, ಕೇರಳದ ಬುಡಕಟ್ಟು ಕುಗ್ರಾಮಗಳಿಗೆ ಭೇಟಿ ನೀಡಿ, ಸ್ಥಳೀಯ ಸಮುದಾಯಗಳಿಗೆ ಮನೆಗಳನ್ನು ನಿರ್ಮಿಸಿ, ಕೊಳಗಳನ್ನು ಸ್ವಚ್ಛ ಗೊಳಿಸಿದ್ದನ್ನು ನೆನಪಿಸಿಕೊಂಡ ಅವರು ನನ್ನ ಇಬ್ಬರು ಪುತ್ರರಿಗೂ ಹಣವು ಎಲ್ಲವೂ ಅಲ್ಲ ಎಂದು  ಕಲಿಸಿದ್ದೆ , ಮಾನವ ಜೀವನದ ಮೌಲ್ಯ ಯಾವಾಗಲೂ ಇರಬೇಕು ಎಂದು ಅವರಿಗೆ ಹೇಳುತ್ತಿದ್ದೆ ಎಂದು ಹೇಳಿದರು.

ಕಳೆದ ವರ್ಷ ಕ್ರಿಸ್‌ಮಸ್‌ನಲ್ಲಿ, ದುಬೈನಲ್ಲಿರುವ ತಮ್ಮ ಮನೆಯ ಅರ್ಧ ಕಿಲೋಮೀಟರ್ ದೂರದಲ್ಲಿ ಕಾರು ಅಪಘಾತದಲ್ಲಿ ಅವರ ಕಿರಿಯ ಮಗ ರೋಹಿತ್ (19) ಮೃತಪಟ್ಟಾಗ ಅವರು ಕುಸಿದು ಹೋಗಿದ್ದರು. ಮೂರನೇ ವರ್ಷದ ವೈದ್ಯಕೀಯ ವಿದ್ಯಾರ್ಥಿ ರೋಹಿತ್ ಯುಎಸ್ ನಿಂದ ಆಗಮಿಸಿದ ಒಂದು ದಿನದ ಬಳಿಕ ತನ್ನ ಸ್ನೇಹಿತ ಶರತ್ ಜೊತೆ ಹೊರಗೆ ಹೋದಾಗ ಅಪಘಾತ ಸಂಭವಿಸಿ ಇಬ್ಬರೂ ಮೃತಪಟ್ಟಿದ್ದರು. ಅವರ ಹಿರಿಯ ಮಗ ಯುಕೆ ವಿಶ್ವವಿದ್ಯಾಲಯವೊಂದರಲ್ಲಿ ಸಾರ್ವಜನಿಕ ಆರೋಗ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದಾನೆ.
ಕೇರಳದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಶಿಕ್ಷಣವನ್ನು ಪ್ರಾಯೋಜಿಸುವುದು ಸೇರಿದಂತೆ ಅವರ ಕಾಲೇಜು ಹಳೆಯ ವಿದ್ಯಾರ್ಥಿಗಳ ಸಮುದಾಯಗಳು ಹಮ್ಮಿಕೊಳ್ಳುವ ಹಲವಾರು ಸೇವೆಗಳಲ್ಲಿ ತಮ್ಮನ್ನು ಕೃಷ್ಣಕುಮಾರ್ ಸಮರ್ಪಿಸಿಕೊಂಡಿದ್ದಾರೆ.

Tags: coronavirusCOVID-19Covid19DubaiflightInternational flightskeralaViralcoronavirus
ShareTweetSendShare
Join us on:

Related Posts

Those who say they have no peace of mind in life, read this story and you will know where to find peace.

ಜೀವನದಲ್ಲಿ ಮನಸ್ಸಿಗೆ ಶಾಂತಿ ಇಲ್ಲ ಎಂದು ಹೇಳುವವರು ಈ ಕಥೆಯನ್ನು ಓದಿ, ಶಾಂತಿ ಎಲ್ಲಿ ಸಿಗುತ್ತದೆ ಎಂದು ನಿಮಗೆ ತಿಳಿಯುತ್ತದೆ.

by admin
February 14, 2026
0

ಮನಸ್ಸಿನ ಶಾಂತಿಗೆ ದಾರಿ ಜೀವನದಲ್ಲಿ ಮನಸ್ಸಿನ ಶಾಂತಿಯನ್ನು ಹುಡುಕುತ್ತಾ ಅಲೆದಾಡುವ ಅನೇಕ ಜನರು ನಮ್ಮ ನಡುವೆ ಇದ್ದಾರೆ. ಮನಸ್ಸಿನ ಶಾಂತಿ ಎಲ್ಲಿದೆ? ಒಬ್ಬ ಋಷಿ ತನ್ನ ಶಿಷ್ಯನಿಗೆ...

india vs pakistan

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

by admin
February 14, 2026
0

ಆತ್ಮೀಯ ಕ್ರಿಕೆಟ್ ಅಭಿಮಾನಿಗಳೇ.., ಐಸಿಸಿ ಬಂಡವಾಳ ಹೂಡಿರುವ, ಬಿಸಿಸಿಐ ನಿರ್ದೇಶನದ, ಪಿಸಿಬಿ ಚಿತ್ರಕಥೆ ಬರೆದಿರುವ, ಶ್ರೀಲಂಕಾ ನಿರ್ಮಾಣದ ಆಧುನಿಕ ಮಹಾಭಾರತದ ಐಸಿಸಿ ಟಿ-20ಯ ಮಹಾ ನಾಟಕ "ದಾಯಾದಿಗಳ...

KV Prabhakar, the protagonist of the CM Cup badminton tournament..!

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಪಾತ್ರಧಾರಿ ಕೆ.ವಿ. ಪ್ರಭಾಕರ್..!

by admin
February 14, 2026
0

ಕೆ.ವಿ. ಪ್ರಭಾಕರ್, ಪತ್ರಿಕಾ ರಂಗ, ರಾಜಕೀಯ ಕ್ಷೇತ್ರದಲ್ಲಿ ಚಿರಪರಿಚಿತ ಹೆಸರು. ಕಳೆದ 13 ವರ್ಷಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೆರಳಿನಂತೆ ಇರುವ ಕೆ.ವಿ. ಪ್ರಭಾಕರ್, ಒಂದು ಲೆಕ್ಕದಲ್ಲಿ...

₹3.6 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ… ರಷ್ಯಾದಿಂದ 288 S-400 ಕ್ಷಿಪಣಿಗಳು

₹3.6 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ… ರಷ್ಯಾದಿಂದ 288 S-400 ಕ್ಷಿಪಣಿಗಳು

by Shwetha
February 14, 2026
0

ಭಾರತದ ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ₹3.6 ಲಕ್ಷ ಕೋಟಿ ಮೌಲ್ಯದ ವಿವಿಧ ಯುದ್ಧ ಸಾಮಗ್ರಿಗಳ ಖರೀದಿಗೆ ರಕ್ಷಣಾ ಖರೀದಿ ಮಂಡಳಿ ಒಪ್ಪಿಗೆ ನೀಡಿದೆ. ಇದರ...

ವಿವಾಹ ಅಥವಾ ಮತಾಂತರದಿಂದ ಜಾತಿ ಅಳಿಯುವುದಿಲ್ಲ: ಹುಟ್ಟಿನಿಂದ ಬಂದ ಜಾತಿ ಸಾಯುವವರೆಗೂ ಶಾಶ್ವತ ಎಂದು ಸಾರಿದ  ಹೈಕೋರ್ಟ್

ವಿವಾಹ ಅಥವಾ ಮತಾಂತರದಿಂದ ಜಾತಿ ಅಳಿಯುವುದಿಲ್ಲ: ಹುಟ್ಟಿನಿಂದ ಬಂದ ಜಾತಿ ಸಾಯುವವರೆಗೂ ಶಾಶ್ವತ ಎಂದು ಸಾರಿದ ಹೈಕೋರ್ಟ್

by Shwetha
February 14, 2026
0

ಲಕ್ನೋ: ಜಾತಿ ಎನ್ನುವುದು ವ್ಯಕ್ತಿಯೊಬ್ಬನ ಹುಟ್ಟಿನಿಂದ ನಿರ್ಧಾರವಾಗುತ್ತದೆಯೇ ವಿನಃ ಆತ ಮಾಡಿಕೊಳ್ಳುವ ವಿವಾಹ ಅಥವಾ ಬದಲಾಯಿಸುವ ಧರ್ಮದಿಂದಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಅತ್ಯಂತ ಮಹತ್ವದ ಹಾಗೂ ಐತಿಹಾಸಿಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram