ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಕೋಟಿಗೊಬ್ಬ-3 ಸಿನಿಮಾ ರಿಲೀಸ್ ಗೆ ಸಿದ್ಧವಾಗಿದೆ. ಈಗಾಗಲೇ ರಿಲೀಸ್ ಆಗಿರುವ ಟೀಸರ್ ಯೂಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿದೆ. ಇದೀಗ ಈ ಚಿತ್ರಕ್ಕೆ ಸಂಬಂಧಿಸಿದಂತೆ ಮತ್ತೊಂದು ಸುದ್ದಿ ಹೊರಬಿದ್ದಿದ್ದು, ಸಿನಿಮಾದ ರಿಲೀಸ್ ಡೇಟ್ ಬಹಿರಂಗವಾಗಿದೆ. ಈಗ ಕೇಳಿಬರುತ್ತಿರುವ ಸುದ್ದಿಯ ಪ್ರಕಾರ ‘ಕೋಟಿಗೊಬ್ಬ-3’ ಮೇ 1ಕ್ಕೆ ಅಂದರೆ ಕಾರ್ಮಿಕ ದಿನಾಚರಣೆ ದಿನ ತೆರೆಗೆ ಬರಲಿದೆ ಎಂದು ಹೇಳಲಾಗುತ್ತಿದೆ.
ಅಂದ್ಹಾಗೆ ‘ಕೋಟಿಗೊಬ್ಬ-3’ಗೂ ಕಿಚ್ಚ ಅಭಿನಯದ ಮಾಣಿಕ್ಯ ಸಿನಿಮಾಗೂ ಒಂದು ಲಿಂಕ್ ಇದೆ. ಮಾಣಿಕ್ಯ ಸಿನಿಮಾ ಕೂಡ ಮೇ 1ಕ್ಕೆ ತೆರೆಗೆ ಬಂದಿತ್ತು. ಅಲ್ಲದೆ ಸೂಪರ್ ಹಿಟ್ ಆಗಿರುವುದಲ್ಲದೆ ಬಾಕ್ಸ್ ಆಫೀಸ್ ನಲ್ಲಿಯೂ ಉತ್ತಮ ಕಲೆಕ್ಷನ್ ಮಾಡಿತ್ತು. ಈಗ ಮತ್ತದೆ ದಿನ ಸುದೀಪ್ ಅಭಿನಯದ ಕೋಟಿಗೊಬ್ಬ-3 ಸಿನಿಮಾ ತೆರೆಗೆ ಬರುತ್ತಿದೆ ಎನ್ನುವ ಸುದ್ದಿ ಕೇಳಿ ಬರುತ್ತಿರುವುದು ಅಭಿಮಾನಿಗಳಿಗೆ ಸಂತಸ ತಂದಿದೆ.
ಇನ್ನು ಕೋಟಿಗೊಬ್ಬ-3 ಸಿನಿಮಾದ ರಿಲೀಸ್ ದಿನಾಂಕದ ಬಗ್ಗೆ ಚಿತ್ರತಂಡ ಯಾವುದೆ ಅಧಿಕೃತ ಮಾಹಿತಿ ಬಹಿರಂಗ ಪಡಿಸಿಲ್ಲ. ಸಧ್ಯದಲ್ಲೇ ರಿಲೀಸ್ ಡೇಟ್ ಬಹಿರಂಗ ಪಡಿಸುವ ಸಾಧ್ಯತೆ ಇದೆ.








