ಬೆಂಗಳೂರು : ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧ ಅಸಂಬದ್ಧ ಹೇಳಿಕೆ ನೀಡಿರುವ ಯತ್ನಾಳ್ ವಿರುದ್ಧ ರಾಜ್ಯ ಕಾಂಗ್ರೆಸ್ ಸಮರ ಸಾರಿದೆ. ಇಂದು ವಿಧಾನಸಭಾ ಕಲಾಪದಲ್ಲಿ ಯತ್ನಾಳ್ ವಿರುದ್ಧ ಬೆಂಕಿಕಾರಿದ ಕಾಂಗ್ರೆಸ್ ನಾಯಕರು, ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿದರು. ಆದ್ರೆ ಇವರ ಮಾತಿಗೆ ಸ್ಪೀಕರ್ ಸ್ಪಂದಿಸದ ಕಾರಣ, ನಾಳೆಯೂ ಯತ್ನಾಳ್ ವಿರುದ್ಧ ಕೈ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿದೆ. ಇಂದು ಕಲಾಪಕ್ಕೆ ಕಾಂಗ್ರೆಸ್ ಶಾಸಕರ ಕಡಿಮೆ ಎದ್ದು ಕಾಣುತ್ತಿತ್ತು. ಇನ್ನು ಬೆಳಗ್ಗೆ ನಡೆದ ಶಾಸಕಾಂಗ ಪಕ್ಷದ ಸಭೆಗೂ ಹೆಚ್ಚಿನ ಸದಸ್ಯರು ಗೈರಾಗಿದ್ದರು. ಕಲಾಪ ವೇಳೆ ಬಿಜೆಪಿ ಶಾಸಕರಿಗೆ ಅನುಗುಣವಾಗಿ ಕಾಂಗ್ರೆಸ್ ಸದಸ್ಯರ ಸಂಖ್ಯೆ ಕಡಿಮೆಯಿದ್ದದ್ದನ್ನು ಗಂಭೀರವಾಗಿ ಪರಿಗಣಿಸಿದ ಸಿದ್ದರಾಮಯ್ಯ ನಾಳೆ ಎಲ್ಲ ಸದಸ್ಯರು ಕಡ್ಡಾಯವಾಗಿ ಕಲಾಪಕ್ಕೆ ಹಾಜರಾಗುವಂತೆ ವಿಪ್ ಜಾರಿಗೊಳಿಸಿದ್ದಾರೆ.
ನಾಳೆ ಮತ್ತೆ ಸಿಎಲ್ ಪಿ ಮೀಟಿಂಗ್!
ಯತ್ನಾಳ್ ವಿರುದ್ಧ ಹೋರಾಟದ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ನಾಳೆ ಮತ್ತೆ ಸಿಎಲ್ ಪಿ ಸಭೆ ಕರೆದಿದ್ದಾರೆ. ನಾಳಿನ ಶಾಸಕಾಂಗ ಸಭೆಗೆ ಹಾಗೂ ಕಲಾಪಕ್ಕೆ ಕಡ್ಡಾಯವಾಗಿ ಕಾಂಗ್ರೆಸ್ ನ ಎಲ್ಲ ಶಾಸಕರು ಹಾಜರಾಗಬೇಕೆಂದು ವಿಪ್ ಜಾರಿಗೊಳಿಸಲಾಗಿದೆ. ಇಲ್ಲಿ ಯಾವ ರೀತಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕೆಂದು ಚೆರ್ಚೆಗಳು ನಡೆಯುತ್ತಿವೆ.
ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ: ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ
ಕಾಠ್ಮಂಡು: ಇತ್ತೀಚಿನ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ನಲುಗಿ ಹೋಗಿರುವ ನೇಪಾಳ, ಇದೀಗ ಜಗತ್ತಿನ ಬಲಿಷ್ಠ ರಾಷ್ಟ್ರಗಳ ವಿರುದ್ಧ ತಿರುಗಿಬಿದ್ದಿದೆ. ಸಾವಿರಾರು ಜೀವಗಳನ್ನು ಬಲಿಪಡೆದ ಈ ನೈಸರ್ಗಿಕ...








