ಈ ಭಾನುವಾರ, ನನ್ನ ಸಾಮಾಜಿಕ ಜಾಲತಾಣಗಳ ಖಾತೆಗಳಿಂದ ಹೊರ ಹೋಗುವ ಬಗ್ಗೆ ಯೋಚಿಸುತ್ತಿದ್ದೇನೆ ಎಂದು ಪ್ರಧಾನಿ ಮೋದಿ ಘೋಷಿಸುವ ಮೂಲಕ ತನ್ನ ಅಭಿಮಾನಿಗಳಿಗೆ ಆಘಾತಕಾರಿ ಸುದ್ದಿ ನೀಡಿದ್ದಾರೆ.
ಸೋಮವಾರ ನಡೆದ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ, ಪಿಎಂ ಮೋದಿ ಅವರು ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಲ್ಲಿನ ತಮ್ಮ ಖಾತೆಗಳಿಂದ ಹೊರ ಹೋಗುವ ಬಗ್ಗೆ ಯೋಚಿಸುತ್ತಿದ್ದೇನೆ ಎಂದು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಘೋಷಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಅತಿಹೆಚ್ಚು ಫಾಲೋವರ್ಸ್ ಗಳನ್ನು ಹೊಂದಿರುವ ರಾಜಕಾರಣಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಒಬ್ಬರು. ಅವರು ಟ್ವಿಟ್ಟರ್ ನಲ್ಲಿ 53.3 ಮಿಲಿಯನ್ ಫಾಲೋವರ್ಸ್ ಹೊಂದಿದ್ದರೆ, ಅವರ ಅಧಿಕೃತ ಫೇಸ್ ಬುಕ್ ನಲ್ಲಿ 44ಮಿಲಿಯನ್ ಗಿಂತ ಹೆಚ್ಚು ಬಳಕೆದಾರರನ್ನು ಹೊಂದಿದ್ದಾರೆ. ಇನ್ಸ್ ಸ್ಟಾಗ್ರಾಮ್ ನಲ್ಲಿ ಪ್ರಧಾನ ಮಂತ್ರಿ 35.2 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ ಮತ್ತು ಅವರ ಯೂಟ್ಯೂಬ್ ಚಾನೆಲ್ 4.5 ಮಿಲಿಯನ್ ಗಿಂತ ಹೆಚ್ಚು ಗ್ರಾಹಕರನ್ನು ಹೊಂದಿದೆ.
ಸೋಶಿಯಲ್ ಮೀಡಿಯಾ ಮೂಲಕವೇ ಪ್ರಧಾನಿ ತಮ್ಮ ಕಾರ್ಯಕ್ರಮಗಳನ್ನು ಕೋಟ್ಯಂತರ ಜನರಿಗೆ ತಿಳಿಸುತ್ತಾ ಹತ್ತಿರವಾಗಿದ್ದರು.
ಯಾವ ಕಾರಣಕ್ಕಾಗಿ ಸಾಮಾಜಿಕ ಜಾಲತಾಣದಿಂದ ಹೊರಗುಳಿಯಲು ಬಯಸಿದ್ದಾರೆ ಎಂಬುವುದು ತಿಳಿಯದ ಕಾರಣ ಸಹಜವಾಗಿಯೇ ಮೋದಿ ನಡೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.








