ಭಾರತದ ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣದಿಂದ ಹೊರಬರುವುದಾಗಿ ಘೋಷಿಸಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ವಿಶ್ವದ ಜನಪ್ರಿಯ ನಾಯಕರಲ್ಲಿ ಒಬ್ಬರಾದ ಪ್ರಧಾನಿ ಮೋದಿ ಹೀಗೆ ಸೋಷಿಯಲ್ ಮೀಡಿಯಾದಿಂದ ಹೊರಬರುವುದಾಗಿ ಘೋಷಿಸಲು ಕಾರಣ ಏನು ಎಂಬುದು ಎಲ್ಲರಲ್ಲೂ ಕುತೂಹಲ ಮೂಡಿಸಿದೆ.
ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪಟ್ಟಕ್ಕೇರಿದಾಗಿನಿಂದ ಸಾಮಾಜಿಕ ಜಾಲತಾಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಫೇಸ್ ಬುಕ್, ಟ್ವಿಟರ್, ಇನ್ಟಾಗ್ರಾಂ ಹಾಗೂ ಯೂಟ್ಯೂಬ್ ಗಳಲ್ಲಿ ದೇಶ-ವಿದೇಶಗಳ ಕುರಿತು ಆಗು-ಹೋಗುಗಳ ಬಗ್ಗೆ ತಮ್ಮ ಅಭಿಪ್ರಾಯ ಅನಿಸಿಕೆಗಳನ್ನು ಹಂಚಿಕೊಳ್ಳುತ್ತಿದ್ದರು. ದೇಶದ ಯಾವುದೇ ಮೂಲೆಯಲ್ಲಿ ಏನೇ ನಡೆದರು ಅದನ್ನು ಪೋಸ್ಟ್ ಮಾಡಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದರು.
ಮೋದಿ ಅವರ ಒಂದು ಟ್ವೀಟ್ ದೇಶದ ಜನರ ಸಾಕಷ್ಟು ಪ್ರಶಂಸೆಗೆ ಒಳಗಾಗುತ್ತಿತ್ತು. ಹಾಗೇ ಅದಕ್ಕೆ ಲಕ್ಷಾಂತರ ಮಂದಿ ಕಾಮೆಂಟ್ ಮಾಡುತ್ತಿದ್ದರು. ಪ್ರಧಾನಿಯವರನ್ನ ಅನುಸರಿಸಿದ ಅದೆಷ್ಟೊ ರಾಜಕೀಯ ಗಣ್ಯರು ಕೊಡ ಸಾಮಾಜಿಕ ಜಾಲತಾಣದಲ್ಲಿ ಖಾತೆ ತೆರೆದು ಬಿಜೆಪಿ ಆಡಳಿತ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಬರೆದು ಪೋಸ್ಟ್ ಮಾಡುತ್ತಿದ್ದರು. ಹೀಗೆ ಸಾಮಾಜಿಕ ಜಾಲತಾಣದಲ್ಲಿ ಕ್ರಾಂತಿ ಮೂಡಿಸಿದ್ದ ಪ್ರಧಾನಿ ಮೋದಿ ಇದೀಗ ಸೋಷಿಯಲ್ ಮೀಡಿಯಾದಿಂದ ಹೊರ ಬರುವುದಾಗಿ ಷೋಷಿಸಿದ್ದಾರೆ.
ಅಷ್ಟಕ್ಕೂ ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣದಿಂದ ಹೊರಬರುವುದಾಗಿ ತೀರ್ಮಾನಿಸಲು ಕಾರಣ ದೇಶದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಹಿಂಸಾಚಾರ, ಕೋಮುಗಲಭೆ ಎನ್ನಲಾಗಿದೆ.
ಹೌದು, ಇತ್ತೀಚೆಗೆ ದೆಹಲಿಯಲ್ಲಿ ನಡೆದ ಹಿಂಸಾಚಾರ ಪ್ರಧಾನಿ ಮೋದಿ ಅವರ ಈ ನಿರ್ಧಾರಕ್ಕೆ ಕಾರಣ ಎಂದು ಹೇಳಲಾಗಿದೆ. ಸಿಎಎ ಹಾಗೂ ಎನ್ ಪಿಆರ್ ವಿರೋಧಿಸಿ ದೆಹಲಿಯಲ್ಲಿ ನಡೆದ ಗುಂಪು ಘರ್ಷಣೆಯಲ್ಲಿ ಗುಪ್ತಚರ ಇಲಾಖೆಯ ಒರ್ವ ಅಧಿಕಾರಿ ಹಾಗೂ ಪೊಲೀಸ್ ಸಿಬ್ಬಂದಿ ಸೇರಿ 40ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಹೀಗೆ ಗುಂಪು ಘರ್ಷಣೆಗೆ ಕಾರಣ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಪ್ರಚೋದನಕಾರಿ ಹೇಳಿಕೆಗಳು ದಿಲ್ಲಿ ಹಿಂಸಾಚಾರಕ್ಕೆ ಕಾರಣ ಎನ್ನಲಾಗಿದೆ.
ಇತ್ತ, ಈಶಾನ್ಯ ರಾಜ್ಯವಾದ ಮೇಘಾಲಯದಲ್ಲೂ ದೆಹಲಿ ಹಿಂಸಾಚಾರದಂತೆ ಗುಂಪು ಘರ್ಷಣೆ ನಡೆದು ಹಲವಾರು ಮಂದಿ ಪ್ರಾಣ ಕಳೆದು ಕೊಂಡಿದ್ದಾರೆ. ಈ ಎಲ್ಲಾ ಗುಂಪು ಘರ್ಷಣೆಗೂ ಸೋಷಿಯಲ್ ಮೀಡಿಯಾದ ಪ್ರಚೋದನಕಾರಿ ಹೇಳಿಕೆಯೇ ಕಾರಣ ಎಂದು ಹೇಳಲಾಗಿದೆ.
ಸಮಾಜಕ್ಕೆ ಪೂರಕವಾಗಬೇಕಿದ್ದ ಸೋಷಿಯಲ್ ಮೀಡಿಯಾಗಳು, ಸಮಾಜಕ್ಕೆ ಮಾರಕವಾಗಿವೆ. ಇದರಿಂದ ಬೇಸರಗೊಂಡಿರುವ ಮೋದಿ, ತಮ್ಮೆಲ್ಲಾ ಖಾತೆಗಳಿಂದ ಹೊರಬರಲು ಕಾರಣ ಎಂದು ಮೋದಿ ಆಪ್ತ ಮೂಲಗಳು ತಿಳಿಸಿವೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣದಿಂದ ಹೊರಬರುವುದಾಗಿ ಘೋಷಿಸಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ.








