ಈಶಾನ್ಯ ದೆಹಲಿಯಲ್ಲಿ ಸಿಎಎ ವಿರೋಧಿಸಿ ನಡೆದ ಹಿಂಸಾಚಾರದ ನಂತರ ಇದೀಗ ಪರಿಸ್ಥಿತಿ ಶಾಂತವಾಗಿದ್ದು, ಸಹಜ ಸ್ಥಿತಿಗೆ ಮರಳುತ್ತಿದೆ. ದೆಹಲಿ ಪೊಲೀಸರು ಹಿಂಸಾಚಾರಕ್ಕೆ ಸಂಬಂಧಿಸಿದ ತನಿಖೆ ಚುರುಕುಗೊಳಿಸಿದ್ದು, ಉತ್ತರ ಪ್ರದೇಶ ಮಾದರಿಯಲ್ಲಿ ಶಿಸ್ತು ಕ್ರಮ ಕೈಗೊಳ್ಳಲು ಚಿಂತನೆ ನಡೆಸಿದ್ದಾರೆ. ಹಿಂಸಾಚಾರದ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟ, ಬೆಂಕಿ ಹಚ್ಚಿದ ಘಟನೆಗಳಿಂದ ಖಾಸಗಿ ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಅಪಾರ ಹಾನಿಯಾಗಿದೆ. ಉತ್ತರ ಪ್ರದೇಶವನ್ನು ಮಾದರಿಯಾಗಿಟ್ಟುಕೊಂಡು, ಆಗಿರುವ ನಷ್ಟವನ್ನು ದಾಳಿಕೋರರಿಂದಲೇ ಭರಿಸಲು, ಅವರ ಆಸ್ತಿ ಜಪ್ತಿ ಮಾಡಲು ಹಾಗೂ ಅವರಿಗೆ ದಂಡ ವಿಧಿಸಲು ಚಿಂತನೆ ನಡೆಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ: ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ
ಕಾಠ್ಮಂಡು: ಇತ್ತೀಚಿನ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ನಲುಗಿ ಹೋಗಿರುವ ನೇಪಾಳ, ಇದೀಗ ಜಗತ್ತಿನ ಬಲಿಷ್ಠ ರಾಷ್ಟ್ರಗಳ ವಿರುದ್ಧ ತಿರುಗಿಬಿದ್ದಿದೆ. ಸಾವಿರಾರು ಜೀವಗಳನ್ನು ಬಲಿಪಡೆದ ಈ ನೈಸರ್ಗಿಕ...








