ಶ್ರೀನಗರ : ಆರ್ಟಿಕಲ್ 370 ಅನ್ನು ಮೋದಿ ನೇತೃತ್ವದ ಕೇಂದ್ರ ಸರ್ಕಾರ ರದ್ದುಗೊಳಿಸಿ ಇಂದಿಗೆ 1 ವರ್ಷ ಪೂರ್ಣಗೊಂಡಿದೆ. ಆದ್ರೆ ಇಂದು ಕಣಿವೆ ನಗರಿಯಲ್ಲಿ ಉಗ್ರಗಾಮಿಗಳು ದಾಳಿಗೆ ಸಂಚು ರೂಪಿಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಯಾದ್ಯಂತ ಕರ್ಫ್ಯೂ ವಿಧಿಸಲಾಗಿದೆ.
ಬಾರಾಮುಲ್ಲಾ ಸೇರಿದಂತೆ ಕೆಲವೆಡೆ ಸ್ಫೋಟಕಗಳು ಪತ್ತೆಯಾಗಿದ್ದು, ಉಗ್ರಗಾಮಿಗಳಿಂದ ವಿಧ್ವಂಸಕ ಕೃತ್ಯಗಳು ನಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ. ಹೀಗಾಗಿ ಜಮ್ಮು-ಕಾಶ್ಮೀರದಾದ್ಯಂತ ನಿನ್ನೆಯಿಂದ ಕರ್ಫ್ಯೂ ವಿದಿಸಲಾಗಿದ್ದು, ಇಂದು ಸಹ ಮುಂದುವರೆದಿದೆ. ಶ್ರೀನಗರ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ಎಲ್ಲ ಜಿಲ್ಲೆಗಳಲ್ಲೂ ಕರ್ಫ್ಯೂ ವಿಧಿಸಲಾಗಿದೆ. ಅಲ್ಲದೆ ಈ ಪ್ರದೇಶಗಳಲ್ಲಿ ತೀವ್ರ ಕಟ್ಟೆಚ್ಚರಿ ವಹಿಸಲಾಗಿದ್ದು, ಭದ್ರತಾ ಪಡೆ ಸಿಬ್ಬಂದಿಗಳು ಎಲ್ಲಾ ಚಟುವಟಿಕೆಗಳ ಮೇಲೂ ತೀವ್ರ ನಿಗಾವಹಿಸಿದ್ದಾರೆ. ಪ್ರತ್ಯೇಕತಾವಾದಿಗಳು ಮತ್ತು ಪಾಕಿಸ್ತಾನ ಬೆಂಬಲಿತ ಗುಂಪುಗಳು ಕರಾಳ ದಿನಾಚರಣೆ ಆಚರಿಸಿ ಹಿಂಸಾತ್ಮಕ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ ಎಂಬ ಮಾಹಿತಿ ಸಿಕ್ಕ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ.
ಜಮ್ಮು ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನಗಳನ್ನು ರದ್ದುಗೊಳಿಸಿದ ಬಳಿಕ ಅನೇಕ ರಾಜಕೀಯ ಮುಖಂಡರು, ಪ್ರತ್ಯೇಕತಾ ವಾದಿಗಳನ್ನು ಗೃಹಬಂಧನದಲ್ಲಿ ಇರಿಸಲಾಗಿತ್ತು. ಕೆಲವರಿಗೆ ಬಿಡುಗಡೆ ಭಾಗ್ಯ ಸಿಕ್ಕಿತಾದ್ರು, ಇನ್ನು ಕೆಲವರ ಗೃಹಬಂಧನದ ಅವಧಿ ವಿಸ್ತರಣೆ ಆಗಿದೆ. ಆ ಸಾಲಿಗೆ ಜಮ್ಮು ಕಾಶ್ಮೀರರದ ಮಾಜಿ ಸಿಎಂ ಮೆಹಬೂಬಾ ಮಫ್ತಿ ಅವರು ಸಹ ಸೇರ್ಪಡೆಗೊಂಡಿದ್ದಾರೆ.