ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

ಸುಲಭವಾಗಿ ದೇಹದ ತೂಕ ಇಳಿಸಲು ಜೇನು ಮತ್ತು ಬೆಳ್ಳುಳ್ಳಿಯ ಟಾನಿಕ್

admin by admin
August 5, 2020
in Health, Newsbeat, Saaksha Special, ಆರೋಗ್ಯ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಸುಲಭವಾಗಿ ದೇಹದ ತೂಕ ಇಳಿಸಲು ಜೇನು ಮತ್ತು ಬೆಳ್ಳುಳ್ಳಿಯ ಟಾನಿಕ್

ಮಂಗಳೂರು, ಅಗಸ್ಟ್ 5: ಬೆಳ್ಳುಳ್ಳಿಯು ಹಲವಾರು ರೀತಿಯ ಔಷಧೀಯ ಗುಣಗಳನ್ನು ಹೊಂದಿದ್ದು ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಭಾರತೀಯ ಅಡಿಗೆಮನೆಗಳಲ್ಲಿ ಹೆಚ್ಚಾಗಿ ಬಳಸುವ ಈ ಬೆಳ್ಳುಳ್ಳಿಯಲ್ಲಿ ಹಲವಾರು ಆರೋಗ್ಯದ ರಹಸ್ಯಗಳು ಅಡಗಿವೆ. ಇದರ ನಿಯಮಿತ ಸೇವನೆಯು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರಿಂದ ಪ್ರಸ್ತುತ ಕೊರೋನಾ ಸಾಂಕ್ರಾಮಿಕದ ಕಾಲದಲ್ಲಿ ಸೋಂಕಿನಿಂದ ದೂರವಿರಲು ಸಹಕಾರಿಯಾಗಿದೆ. ಇದು ನಿಮ್ಮ ರಕ್ತನಾಳಗಳನ್ನು ಸಡಿಲಗೊಳಿಸುತ್ತದೆ ಮತ್ತು ನಿಮ್ಮ ಅಪಧಮನಿಗಳ ಮೂಲಕ ರಕ್ತದ ಸುಗಮ ಹರಿವಿಗೆ ನೆರವಾಗುತ್ತದೆ. ಇದು ನಿಮ್ಮ ಹೃದ್ರೋಗದ ಅಪಾಯ ಕಡಿಮೆ ಮಾಡುತ್ತದೆ. ಉರಿಯೂತದ ವಿರುದ್ಧ ಹೋರಾಡಲು ಸಹ ಇದು ಸಹಾಯ ಮಾಡುತ್ತದೆ.

Related posts

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

August 2, 2026
84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

August 2, 2026

ಬೆಳ್ಳುಳ್ಳಿಯಲ್ಲಿರುವ ಪ್ಲೇವೊನೋಯ್ಡ್ಸ್ ಡಿಎನ್ಎಗೆ ಹಾನಿಯಾಗದಂತೆ ಕಾಪಾಡುವ ‌ಕಾರಣ ಇದು ಕ್ಯಾನ್ಸರ್‌ ಕಣಗಳು ಉಂಟಾಗುವುದನ್ನು ತಡೆಯಲು ನೆರವಾಗುತ್ತದೆ. ಬೆಳ್ಳುಳ್ಳಿಯಲ್ಲಿ ಆ್ಯಂಟಿಆಕ್ಸಿಡೆಂಡ್ ಅಂಶ ಹೆಚ್ಚಾಗಿರುವ ಕಾರಣ ಮಾನಸಿಕ ಒತ್ತಡ ಕಡಿಮೆ ಮಾಡಲು ಪ್ರಯೋಜನಕಾರಿಯಾಗಿದೆ
ಅಷ್ಟೇ ಅಲ್ಲ ಬೆಳ್ಳುಳ್ಳಿ ಪರಿಣಾಮಕಾರಿಯಾಗಿ ತೂಕವನ್ನು ಕಡಿಮೆ ಮಾಡುವ ಗುಣಗಳನ್ನು ಸಹ ಹೊಂದಿದೆ. ‌
ಇದು ಬಿ 6 ಮತ್ತು ಸಿ, ಫೈಬರ್, ಮ್ಯಾಂಗನೀಸ್, ಕ್ಯಾಲ್ಸಿಯಂನಂತಹ ಅನೇಕ ಜೀವಸತ್ವಗಳಿಂದ ತುಂಬಿದೆ. ಇದು ಯಾವುದೇ ಸಮಯದಲ್ಲೂ ಹೆಚ್ಚುವರಿ ಕೊಬ್ಬನ್ನು, ವಿಶೇಷವಾಗಿ ಹೊಟ್ಟೆಯ ಕೊಬ್ಬನ್ನು ತೊಡೆದುಹಾಕಲು ಸಹಾಯ ಮಾಡುವ ಸೂಪರ್ ಆಹಾರವಾಗಿದೆ. ಬೆಳ್ಳುಳ್ಳಿ ಸಹಾಯದಿಂದ ವ್ಯಾಯಾಮ ಮತ್ತು ಆಹಾರದ ನಿರ್ಬಂಧಗಳಿಲ್ಲದೆ ತೂಕವನ್ನು ಕಳೆದುಕೊಳ್ಳಬಹುದು.

ಬೆಳ್ಳುಳ್ಳಿ ಸೇವನೆಯಿಂದ ತೂಕ ಇಳಿಸುವುದು ಹೇಗೆ

ನೀವು ತೂಕ ಇಳಿಸಲು ಪ್ರಯತ್ನಿಸುತ್ತಿದ್ದರೆ, ಅದು ಸುಲಭವಲ್ಲ ಎಂದು ನಿಮಗೆ ಈಗಾಗಲೇ ತಿಳಿದಿರುತ್ತದೆ. ಕೆಲವೊಮ್ಮೆ, ಶ್ರಮದಾಯಕ ವ್ಯಾಯಾಮದಿಂದ ಹಿಡಿದು ಆಹಾರ ಸೇವನೆಯನ್ನು ಕಡಿಮೆಗೊಳಿಸುವ ತನಕ ಎಲ್ಲವನ್ನೂ ಪ್ರಯತ್ನಿಸಿದರೂ ಸಹ, ನಿಮಗೆ ತೂಕವನ್ನು ಕಳೆದುಕೊಳ್ಳಲು ಅಸಾಧ್ಯವಾಗಬಹುದು. ಆದರೆ ನಿಮಗೆ ಕೆಲವು ಸರಳ ರಹಸ್ಯಗಳು ತಿಳಿದಿದ್ದರೆ, ಖಂಡಿತವಾಗಿಯೂ ತೂಕ ಇಳಿಸಿಕೊಳ್ಳಲು ನೀವು ಯಶಸ್ವಿಯಾಗುತ್ತೀರಿ. ಹಸಿ ಬೆಳ್ಳುಳ್ಳಿ ಸೇವನೆ ತೂಕವು‌ ಕಳೆದುಕೊಳ್ಳಲು ಅಂತಹ ಒಂದು ಉತ್ತಮ ರಹಸ್ಯವಾಗಿದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಚ್ಚಗಿನ ನೀರನ್ನು ಕುಡಿಯುವುದು, ಮುಂಜಾನೆ ನಿಂಬೆ ಮತ್ತು ಜೇನುತುಪ್ಪವನ್ನು ಸೇವಿಸುವುದು ಮತ್ತು ಇತರ ವಿಧಾನಗಳ ಬಗ್ಗೆ ನಿಮಗೆ ತಿಳಿದಿರಬಹುದು. ಆದರೆ ಇಲ್ಲಿ, ನಾವು ಬೆಳ್ಳುಳ್ಳಿಯನ್ನು ಜೇನುತುಪ್ಪದಲ್ಲಿ ಸೇರಿಸಿ ಹೇಗೆ ಪರಿಣಾಮಕಾರಿಯಾಗಿ ತೂಕವನ್ನು ಕಳೆದುಕೊಳ್ಳಬಹುದು ‌ಎಂದು ವಿವರಿಸಿದ್ದೇವೆ .

ಹಸಿ ಬೆಳ್ಳುಳ್ಳಿ ಮತ್ತು ಜೇನುತುಪ್ಪದ ಪ್ರಯೋಜನಗಳು

ನೀವು ಖಾಲಿ ಹೊಟ್ಟೆಯಲ್ಲಿ ಎರಡು ಹಸಿ ಬೆಳ್ಳುಳ್ಳಿಯನ್ನು ಸೇವಿಸಿದರೆ, ಅದು ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ ಮತ್ತು ನಿಮ್ಮ ದೇಹವನ್ನು ನಿರ್ವಿಷಗೊಳಿಸುತ್ತದೆ. ಇದಲ್ಲದೆ, ನೀವು ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟದಲ್ಲಿ ಸುಧಾರಣೆಯನ್ನು ಸಹ ಕಾಣಬಹುದು. ಅಷ್ಟೇ ಅಲ್ಲ ನೀವು ಉತ್ತಮ ರೋಗನಿರೋಧಕ ಶಕ್ತಿಯನ್ನು ಪಡೆಯಲು ಕೂಡ ಬೆಳ್ಳುಳ್ಳಿ ನಿಮಗೆ ಸಹಕಾರಿಯಾಗಿದೆ. ಇದು ಶೀತ ಮತ್ತು ಜ್ವರವನ್ನು ಕಡಿಮೆಗೊಳಿಸುವುದರ ಜೊತೆಗೆ ತೂಕವನ್ನು ಕಳೆದುಕೊಳ್ಳಲು ಸಹ ಸಹಾಯ ಮಾಡುತ್ತದೆ.
ಆದರೆ ಇದಕ್ಕೆ ನೀವು ಜೇನುತುಪ್ಪವನ್ನು ಸೇರಿಸಿದಾಗ, ಅದು ನಿಮ್ಮನ್ನು ಸಂಪೂರ್ಣವಾಗಿ ನಿರ್ವಿಷಗೊಳಿಸುವ ಪ್ರಬಲ ಟಾನಿಕ್ ಆಗುತ್ತದೆ. ನಿಮ್ಮ ಜೀರ್ಣಕ್ರಿಯೆಯನ್ನು ಸುಧಾರಿಸುವ ಮೂಲಕ ಮತ್ತು ಚಯಾಪಚಯವನ್ನು ಹೆಚ್ಚಿಸಿ ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಜೇನು ಹಸಿವನ್ನು ತಡೆಯುತ್ತದೆ ಮತ್ತು ಇದು ಕೊಬ್ಬು ಮತ್ತು ಕೊಲೆಸ್ಟ್ರಾಲ್ ಮುಕ್ತವಾಗಿದೆ. ಇದರ ಸೇವನೆ ದಿನವಿಡೀ ನಿಮ್ಮನ್ನು ಚೈತನ್ಯಗೊಳಿಸುತ್ತದೆ. ಜೊತೆಗೆ ಬೆಳ್ಳುಳ್ಳಿ ನಿಮ್ಮ ತೂಕವನ್ನು ಕಡಿಮೆ ಮಾಡಲು ಮತ್ತು ರೋಗಗಳನ್ನು ದೂರವಿರಿಸಲು ಸಹಾಯ ಮಾಡುತ್ತದೆ.

ಸುಲಭವಾಗಿ ತೂಕವನ್ನು ಕಡಿಮೆ ಮಾಡಲು ಟಾನಿಕ್ ಅನ್ನು ತಯಾರಿಸುವ ಬಗೆ :

ಗಾಜಿನ ಜಾರು ತೆಗೆದುಕೊಂಡು ಅದರಲ್ಲಿ ಅರ್ಧದಷ್ಟು ಶುದ್ಧವಾದ ಮತ್ತು ಸಾವಯವ ಜೇನುತುಪ್ಪವನ್ನು ತುಂಬಿಸಿ. ಕೆಲವು ಬೆಳ್ಳುಳ್ಳಿ ಎಸಳುಗಳನ್ನು ತೆಗೆದುಕೊಂಡು ಅದರ ಸಿಪ್ಪೆಯನ್ನು ತೆಗೆದು ಜೇನುತುಪ್ಪದ ಜಾರಿಗೆ ಸೇರಿಸಿ. ಬೆಳ್ಳುಳ್ಳಿಯನ್ನು ಸಂಪೂರ್ಣವಾಗಿ ಜೇನುತುಪ್ಪದಲ್ಲಿ ಮುಳುಗಿಸಬೇಕು. ಜೇನಿನಲ್ಲಿ ಬೆಳ್ಳುಳ್ಳಿಯ ಎಸಳುಗಳನ್ನು ಬೆರೆಸಿಟ್ಟಿರುವ ಗಾಜಿನ ಜಾರನ್ನು ಒಂದು ತಿಂಗಳವರೆಗೆ ಹಾಗೆಯೇ ಮುಚ್ಚಿಡಿ. ಇದು ಬೆಳ್ಳುಳ್ಳಿ ಮತ್ತು ಜೇನುತುಪ್ಪದ ಪೋಷಕಾಂಶಗಳನ್ನು ವಿಲೀನಗೊಳಿಸಲು ಅನುವು ಮಾಡಿಕೊಡುತ್ತದೆ.

ಇದನ್ನು ಸೇವಿಸುವ ‌ಬಗೆ ಹೇಗೆ

ಇದನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳುವುದರಿಂದ ನೀವು ಉತ್ತಮ ಪರಿಣಾಮವನ್ನು ನಿರೀಕ್ಷಿಸಬಹುದು. ಬಳಿಕ ಗಾಜಿನ ಜಾರಿನಲ್ಲಿರುವ ಬೆಳ್ಳುಳ್ಳಿಯನ್ನು ತೆಗೆದುಕೊಂಡು ಅದನ್ನು ಪುಡಿ ಮಾಡಿ ಸೇವಿಸಿ. ಇದನ್ನು ಪ್ರತಿದಿನ ಒಂದು ತಿಂಗಳವರೆಗೆ ಪ್ರಯತ್ನಿಸಿದರೆ ಗಮನಾರ್ಹ ‌ಬದಲಾವಣೆಯನ್ನು‌ ನೀವು ಗಮನಿಸಬಹುದು.

ಎಚ್ಚರಿಕೆ :

ಇದು ಯಾರಾದರೂ ಬಳಸಬಹುದಾದ ಆರೋಗ್ಯಕರ ಟಾನಿಕ್ ಆಗಿದೆ. ಆದರೆ ನೀವು ಆಸ್ತಮಾದಿಂದ ಬಳಲುತ್ತಿದ್ದರೆ, ಇದನ್ನು ಪ್ರಯತ್ನಿಸುವ ಮೊದಲು ವೈದ್ಯರನ್ನು ಸಂಪರ್ಕಿಸಿ. ಆಸ್ತಮಾದಿಂದ ಬಳಲುತ್ತಿರುವವರಿಗೆ ಬೆಳ್ಳುಳ್ಳಿ ಒಳ್ಳೆಯದಲ್ಲ. ಅಷ್ಟೇ ಅಲ್ಲ ಇದನ್ನು ಅತಿಯಾಗಿ ಬಳಸದಂತೆ ಕೂಡ ಎಚ್ಚರಿಕೆ ವಹಿಸಿ. ದಿನಕ್ಕೆ ಕೇವಲ 2-3 ಎಸಳುಗಳನ್ನು ಬಳಸಿಕೊಂಡು ಈ ಟಾನಿಕ್ ಅನ್ನು ಸೇವಿಸಿ

Tags: AyurvedaCOVID-19FitnessHealthHealthy-lifestyleherbal-medicinesHome-madeImmunityIndian-foodLatestmedicineweight-loss
ShareTweetSendShare
Join us on:

Related Posts

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

by Shwetha
August 2, 2026
0

ನಟ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಆಗಸ್ಟ್ 8ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ 'ಟಾಕ್ಸಿಕ್' ಟ್ರೇಲರ್ ಲಾಂಚ್ ಕಾರ್ಯಕ್ರಮ...

ಸ್ವಾತಂತ್ರ್ಯ ಎಂದರೆ ಇಷ್ಟಬಂದಿದ್ದನ್ನು ಮಾಡುವುದಲ್ಲ, ಯುವ ಭಾರತಕ್ಕೆ ರಾಷ್ಟ್ರ ನಿರ್ಮಾಣದ ಪಾಠ ಮಾಡಿದ ಅಜಿತ್ ದೋವಲ್: ಸ್ವಾತಂತ್ರ್ಯದ ನಿಜವಾದ ಅರ್ಥ ವಿವರಿಸಿದ ಭದ್ರತಾ ಸಲಹೆಗಾರ.

ಸ್ವಾತಂತ್ರ್ಯ ಎಂದರೆ ಇಷ್ಟಬಂದಿದ್ದನ್ನು ಮಾಡುವುದಲ್ಲ, ಯುವ ಭಾರತಕ್ಕೆ ರಾಷ್ಟ್ರ ನಿರ್ಮಾಣದ ಪಾಠ ಮಾಡಿದ ಅಜಿತ್ ದೋವಲ್: ಸ್ವಾತಂತ್ರ್ಯದ ನಿಜವಾದ ಅರ್ಥ ವಿವರಿಸಿದ ಭದ್ರತಾ ಸಲಹೆಗಾರ.

by Shwetha
August 2, 2026
0

ಪುಣೆ: ದೇಶದ ಯುವಜನತೆಗೆ ಸ್ವಾತಂತ್ರ್ಯದ ನಿಜವಾದ ಅರ್ಥ ಮತ್ತು ಅದರೊಂದಿಗೆ ಬರುವ ಜವಾಬ್ದಾರಿಯ ಬಗ್ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಗಂಭೀರ ಎಚ್ಚರಿಕೆ ನೀಡಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram