ರಾಜ್ಯದಲ್ಲಿ ಹಲವು ದಿನಗಳಿಂದ ವರುಣನ ಅಬ್ಬರ ಜೋರಾಗಿದೆ. ಇನ್ನೂ ಕೊಡಗು, ಚಿಕ್ಕಮಗಳೂರು, ಮಂಗಳೂರು, ಉತ್ತರಕನ್ನಡ, ಬೆಮಗಳೂರು ಸೇರಿದಂತೆ ಹಲವೆಡೆ ವರುಣ ರೌದ್ರಾವತರಾ ತೋರಿದ್ದು, ಕರಾವಳಿ ಪ್ರದೇಶಗಳಲ್ಲಿ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಈ ನಡುವೆ ಮಳೆ ಹೀಗೆ ಮುಂದುವರೆಯಲಿದ್ದು, ಪ್ರವಾಹದ ಪರಿಸ್ಥಿತಿ ಎದುರಾಗಬಹುದಾದ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ ನೆರೆ ಭೀತಿ ಎದುರಿಸುತ್ತಿರುವ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿರುವುದಾಗಿ ಕಂದಾಯ ಸಚಿವರಾದ ಆರ್ ಅಶೋಕ್ ಅವರು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಸಚಿವರು ಪ್ರವಾಹ ಪರಿಸ್ಥಿತಿ ಎದುರಿಸಲು ಏಪ್ರಿಲ್‌ನಿಂದಲೇ ಸಿದ್ಧತೆ ಮಾಡಲಾಗಿದೆ. ಮಂಗಳವಾರವೂ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಸಂವಾದ ಮಾಡಿ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ರೆಡ್‌ಅಲರ್ಟ್‌ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ಕಾವೇರಿ ಕೊಳ್ಳದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಸಕಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿರುವುದಾಗಿಯೂ ಸಚಿವ ಆರ್ ಅಶೋಕ್ ಅವರು ತಿಳಿಸಿದ್ದಾರೆ. ಕಾಫಿ ನಾಡು ಚಿಕ್ಕಮಗಳೂರಿನಲ್ಲೂ ಭಾರೀ ಮಳೆಯಿಂದ ಅನಾಹುತಗಳು ಸಂಭವಿಸಿವೆ. ಅಲ್ಲಲ್ಲಿ ಗುಡ್ಡ ಕುಸಿತ, ಮರ ಕುಸಿತದ ಜೊತೆಗೆ ಹಲವಾರು ಮನೆಗಳಿಗೆ ಹಾನಿಯುಂಟಾಗಿದ್ದು, ತಕ್ಷಣವೇ 10 ಸಾವಿರ ಪರಿಹಾರ ಒದಗಿಸುವಂತೆ ಸೂಚಿರುವುದಾಗಿ ತಿಳಿಸಿದ್ದಾರೆ ಕೊಡಗು, ದಕ್ಷಿಣ ಕನ್ನಡ, ಧಾರವಾಡ ಹಾಗೂ ಬೆಳಗಾವಿ ಸೇರಿದಂತೆ ಇನ್ನೂ ಹಲವು ಜಿಲ್ಲೆಗಳಿಗೆ ಪ್ರವಾಹದ ಭೀತಿ ಎದುರಾಗಿರುವ ಪರಿಣಾಮ ಎನ್‌ಡಿಆರ್‌ಎಫ್‌ತಂಡವನ್ನು ಕಳುಹಿಸಿಕೊಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
2027ರ ಎಸ್ಎಸ್ಎಲ್ಸಿ ಪರೀಕ್ಷೆ ನೋಂದಣಿ ಆರಂಭ: ನವೆಂಬರ್ 11ರೊಳಗೆ ವಿದ್ಯಾರ್ಥಿಗಳ ವಿವರ ಸಲ್ಲಿಸಲು KSEAB ಸೂಚನೆ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) 2027ರ ಎಸ್ಎಸ್ಎಲ್ಸಿ ಪರೀಕ್ಷೆ-1ಕ್ಕೆ ವಿದ್ಯಾರ್ಥಿಗಳ ನೋಂದಣಿ ಪ್ರಕ್ರಿಯೆಯನ್ನು ಆರಂಭಿಸಿದೆ. ರಾಜ್ಯದ ಮಾನ್ಯತೆ ಪಡೆದ ಸರ್ಕಾರಿ, ಅನುದಾನಿತ ಹಾಗೂ...








