ಬೆಂಗಳೂರಿನ ಟೆಕ್ಕಿಯೊಬ್ಬನಿಗೆ ತೆಲಂಗಾಣದಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಸೋಂಕು ಹರಡದಂತೆ ಸಮರ್ಪಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಾಜ್ಯದ ಆರೋಗ್ಯ ಸಚಿವ ಬಿ ಶ್ರೀರಾಮುಲು ಹೇಳಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳವಾರ ಆರೋಗ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು, ಆಯುಕ್ತರು ಮತ್ತು ಹಿರಿಯ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಕೊರೋನಾ ಸೋಂಕು ಪೀಡಿತ ಟೆಕ್ಕಿ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕ್ಷಣದಿಂದ ಹೈದರಾಬಾದ್ ಗೆ ತೆರಳುವವರೆಗೂ ಆತ ಸಂಪರ್ಕಿಸಿರುವ ಪ್ರತಿಯೊಬ್ಬರನ್ನೂ ಪತ್ತೆ ಮಾಡಿ ಕೂಡಲೇ ಅವರಿಗೆ ಸೋಂಕು ಪರೀಕ್ಷೆ ನಡೆಸಿ ನಿಗಾದಲ್ಲಿ ಇರಿಸಲಾಗುವುದು ಎಂದು ಸಾಂಕ್ರಾಮಿಕ ರೋಗ ವಿಭಾಗದ ಜಂಟಿ ನಿರ್ದೇಶಕ ಡಾ| ಬಿ.ಜಿ.ಪ್ರಕಾಶ್ ಕುಮಾರ್ ಮಾಹಿತಿ ನೀಡಿದರು.
ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’
ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಮರಳಿ ಪಡೆಯಲು ಹೊಸ ರಾಜಕೀಯ ತಂತ್ರವನ್ನು ರೂಪಿಸಿದೆ. ಈ ತಂತ್ರಕ್ಕೆ ಆರ್ಎಸ್ಎಸ್ ಸಹ ಒಪ್ಪಿಗೆ...








