ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2020
ಬೆಂಗಳೂರು, ಅಗಸ್ಟ್ 6: ಕರ್ನಾಟಕ ಮಾಧ್ಯಮಿಕ ಶಿಕ್ಷಣ ಪರೀಕ್ಷಾ ಮಂಡಳಿ (ಕೆಎಸ್‌ಇಇಬಿ) ಎಸ್‌ಎಸ್‌ಎಲ್‌ಸಿ ಫಲಿತಾಂಶ ದಿನಾಂಕ ಮತ್ತು ಸಮಯವನ್ನು ಶೀಘ್ರದಲ್ಲೇ ತನ್ನ ಅಧಿಕೃತ ವೆಬ್‌ಸೈಟ್ karresults.nic.in ನಲ್ಲಿ ಪ್ರಕಟಿಸಲಿದೆ. ಕಳೆದ ತಿಂಗಳು ರಾಜ್ಯ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2020 ಅನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಹೇಳಿಕೆ ನೀಡಿದ್ದಾರೆ. ವರದಿಗಳ ಪ್ರಕಾರ ಎಸ್‌ಎಸ್‌ಎಲ್‌ಸಿ ಫಲಿತಾಂಶ 2020 ಆಗಸ್ಟ್ 7, 2020 ರೊಳಗೆ ಘೋಷಿಸುವ ನಿರೀಕ್ಷೆಯಿದೆ.
ಹೆಚ್ಚುತ್ತಿರುವ ಕೊರೋನವೈರಸ್ ಪ್ರಕರಣಗಳ ಹೊರತಾಗಿಯೂ ಸರ್ಕಾರವು ಯಶಸ್ವಿಯಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಿತ್ತು. ಜೂನ್ 25 ರಂದು 8.5 ಲಕ್ಷ ವಿದ್ಯಾರ್ಥಿಗಳಲ್ಲಿ ಸರಾಸರಿ ಶೇಕಡಾ 98 ರಷ್ಟು ವಿದ್ಯಾರ್ಥಿಗಳು ಕರ್ನಾಟಕ ಎಸ್‌ಎಸ್‌ಎಲ್‌ಸಿ 2020 ಪರೀಕ್ಷೆ ಬರೆದಿದ್ದಾರೆ. ಮಾಸ್ಕ್ ಗಳನ್ನು ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2020 ಅನ್ನು ನೀವು ಹೇಗೆ ಪರಿಶೀಲಿಸಬಹುದು ಎಂಬ ಮಾಹಿತಿ ಇಲ್ಲಿದೆ:
ಹಂತ 1: ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ಅಂದರೆ
karresults.nic.in
ಹಂತ 2: ಎಸ್‌ಎಸ್‌ಎಲ್‌ಸಿ ಫಲಿತಾಂಶ 2020 ಕರ್ನಾಟಕ ಮಂಡಳಿಯ ಮೇಲೆ ಕ್ಲಿಕ್ ಮಾಡಿ
ಹಂತ 3: ನಿಮ್ಮ ಪರೀಕ್ಷೆಯ ರೋಲ್ ಸಂಖ್ಯೆ ಮತ್ತು ಇತರ ವಿವರಗಳನ್ನು ಸಲ್ಲಿಸಿ
ಹಂತ 4: ನಿಮ್ಮ ಎಸ್‌ಎಸ್‌ಎಲ್‌ಸಿ ಫಲಿತಾಂಶ 2020 ಅನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ
ಹಂತ 6: ಪಿಡಿಎಫ್ ಡೌನ್‌ಲೋಡ್ ಮಾಡಿ ಮತ್ತು ಪ್ರಿಂಟ್ ಔಟ್ ತೆಗೆದುಕೊಳ್ಳಿ