ಕೊಡಗು ತಲಕಾವೇರಿ ಗುಡ್ಡ ಕುಸಿತ ಎರಡು ಮನೆ ಸಂಪೂರ್ಣ ನಾಶ; ನಾಲ್ವರ ಕಣ್ಮರೆ
ಕೊಡಗು ಜಿಲ್ಲೆಯ ಭಾಗಮಂಡಲ ವ್ಯಾಪ್ತಿಯ ತಲಕಾವೇರಿಯಲ್ಲಿ ನಿನ್ನೆ ತಡರಾತ್ರಿ ಸುರಿದ ಮಳೆಗೆ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದ ಒಂದು ಭಾಗ ಜರಿದು ತಲಕಾವೇರಿಯ ದೇವಸ್ಥಾನದ ಅರ್ಚಕರುಗಳ ಎರಡು ಮನೆ ಮೇಲೆ ಸಂಪೂರ್ಣ ನಾಶವಾಗಿದೆ.
ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ತಂಡದ ತಕ್ಷಣ ಕಾರ್ಯಾಚರಣೆ ತಂಡವು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಕೈಗೊಂಡಿದ್ದು, ಅವರು ನೀಡಿರುವ ಪ್ರಾಥಮಿಕ ಮಾಹಿತಿ ಪ್ರಕಾರ ಎರಡು ಮನೆಗಳ ಪೈಕಿ ಒಬ್ಬರು ಅರ್ಚಕರು ಹೊಸ ಮನೆ ನಿರ್ಮಿಸಿಕೊಂಡು ಕುಟುಂಬದೊಂದಿಗೆ ಭಾಗಮಂಡಲದಲ್ಲಿ ನೆಲೆಸಿದ್ದರು. ತಲಕಾವೇರಿಯ ಮನೆ ಖಾಲಿ ಇರುತ್ತದೆ. ಇನ್ನೊಬ್ಬ ಅರ್ಚಕರು ತಲಕಾವೇರಿಯ ಮನೆಯಲ್ಲಿಯೇ ಕುಟುಂಬದೊಂದಿಗೆ ವಾಸವಿರುತ್ತಾರೆ. 04 ಜನ ಕಾಣೆಯಾಗಿರುವ ಮಾಹಿತಿ ಇದೆ.
ಜಿಲ್ಲೆಯ Advanced Rescue Team ಸದರಿ ಸ್ಥಳಕ್ಕೆ ಧಾವಿಸುತ್ತಿದ್ದು, ಪರಿಶೀಲನೆ ನಂತರ ಹೆಚ್ಚಿನ ಮಾಹಿತಿಯನ್ನು ನೀಡಲಾಗುವುದು ಎಂದು ಜಿಲ್ಲಾಡಳಿತ ವಿವರ ನೀಡಿದೆ. 2018ರಲ್ಲಿ ಕೊಡಗಿನಲ್ಲಿ ಜಲಪ್ರವಾಹ ಸಂಭವಿಸಿದಂತೆ ಈ ವರ್ಷವೂ ಕುಂಭದ್ರೋಣ ಮಳೆ ಸುರಿಯುತ್ತಿದ್ದು ಮತ್ತೊಂದು ಪ್ರಾಕೃತಿಕ ಅವಘಡದ ಸೂಚನೆ ನೀಡುವಂತಿದೆ. ಈ ಹಿನ್ನಲೆಯಲ್ಲಿ ಸೂಕ್ಷ್ಮ ಪ್ರದೇಶದ ನಿವಾಸಿಗಳಿಗೆ ಎಚ್ಚರಿಕೆ ನೀಡಲಾಗಿದ್ದು ಸುರಕ್ಷತೆಯ ಕಳಕಳಿಯ ಮನವಿ ಮಾಡಿಕೊಂಡಿದೆ ಕೊಡಗು ಜಿಲ್ಲಾಡಳಿತ









