ಒಂದೆಡೆ ಕೊರೊನಾ ಬಿಕ್ಕಟ್ಟಿನಿಂದ ವ್ಯಾಪಾರ ನೆಲಕಚ್ಚಿದ್ರೆ, ಮತ್ತೊಂದೆಡೆ ದಾರಾಕಾರ ಮಳೆಯಿಂದಾಗಿ ಬೆಳೆ ನಷ್ಟ , ವ್ಯಾಪಾರ ಕುಂಠಿತ ಹೀಗೆ ಸಂಕಷ್ಟದಲ್ಲಿರುವ ರೈತರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ರೈತರಿಗೆ ಹೆಚ್ಚಿನ ನೆರವು ನೀಡುವ ಸಲುವಾಗಿ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಬೆಲೆ ಸ್ಥಿರೀಕರಣ ಸಂಪುಟ ಉಪಸಮಿತಿ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಕೊಬ್ಬರಿಗೆ ಹೆಚ್ಚಿನ ಪ್ರೋತ್ಸಾಹ ಧನ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಡಿಸಿಎಂ ಲಕ್ಷ್ಮಣ ಸವದಿ ಅವರ ನೇತೃತ್ವದಲ್ಲಿ ನಡೆದ ಸಂಪುಟ ಉಪಸಮಿತಿ ಸಭೆಯಲ್ಲಿ ಕೊಬ್ಬರಿಗೆ 1000 ರೂ. ಪ್ರೋತ್ಸಾಹಧನ ನೀಡಲು ತೀರ್ಮಾನಿಸಲಾಗಿದೆ. ಕೇಂದ್ರ ಸರ್ಕಾರ 10,300 ರೂ. ಬೆಂಬಲ ಬೆಲೆ ಘೋಷಿಸಿದೆ. ಇದರೊಂದಿಗೆ ಹೆಚ್ಚುವರಿಯಾಗಿ 1000 ರೂ. ಪ್ರೋತ್ಸಾಹ ಧನವನ್ನು ರಾಜ್ಯ ಸರ್ಕಾರದಿಂದಲೇ ಭರಿಸಲು ತೀರ್ಮಾನಿಸಲಾಗಿದೆ. ಈ ಮೂಲಕ ಕ್ವಿಂಟಾಲ್ ಕೊಬ್ಬರಿಗೆ ತಲಾ 11,300 ರೂ. ಸಿಗಲಿದ್ದು, ಸರ್ಕಾರದ ನಿರ್ದಾರರಿಂದ ರೈತರಲ್ಲಿ ಸಂತಸ ಮೂಡಿದೆ.








