ಬೆಳಗಾವಿ : ಮಲಪ್ರಭಾ ನದಿ ರಭಸಕ್ಕೆ ಖಾನಾಪುರ ಬಳಿ ಬೃಹತ್ ಸೇತುವೆ ಕುಸಿತವಾಗಿದೆ. ಖಾನಾಪುರ ತಾಲೂಕಿನ ಯಡೋಗಾ ಹಾಗೂ ಚಾಪಗಾಂವಿ ಸಂಪರ್ಕಿಸುವ ಸೇತುವೆ ನೀರಿನ ರಭಸಕ್ಕೆ ಕುಸಿಯಲು ಆರಂಭಿಸಿದ್ದು ಯಡೋಗಾ ಹಾಗೂ ಚಾಪಗಾಂವಿ ಜನತೆಯಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದೆ. ಇನ್ನೂ ಸೇತುವೆ ಮುಳುಗಡೆ ಪರಿಣಾಮ ಕಳೆದ ಮೂರು ದಿನಗಳಿಂದ ಯಡೋಗಾ ಹಾಗೂ ಚಾಪಗಾಂವಿ ಮಧ್ಯೆದ ಸಂಪರ್ಕ ಸ್ಥಗಿತವಾಗಿದೆ. ಮಲಪ್ರಭಾ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಯಡೋಗಾ ಹಾಗೂ ಚಾಪಗಾಂವಿ ಗ್ರಾಮದಲ್ಲಿ ಅಪಾರ ಪ್ರಮಾಣದ ಭತ್ತದ ಬೆಳೆಗಳು ನಾಶವಾಗಿದ್ದು, ಅನ್ನದಾತರು ಕಂಗಾಲಾಗಿದ್ದಾರೆ.
ರಸ್ತೆ ಮುಳುಗಡೆಯಿಂದ ಉಭಯ ಗ್ರಾಮಗಳ ಸಂಪರ್ಕ ಕಡಿತ ವಾಗಿದ್ದು, ಅನೇಕ ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡು ಜನರು ಪರದಾಡುವಂತಾಗಿದೆ. ಇತ್ತ ಜಿಲ್ಲೆಯಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದ್ದು, ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸಕಲ ರೀತಿಯ ಸಿದ್ಧತೆಗಳನ್ನು ನಡೆಸಿಕೊಳ್ಳುತ್ತಿದೆ.
ಕಾನೂನು ಪ್ರಕಾರ ದಾಖಲೆ ಸರಿ ಇದ್ದವರಿಗೆ ಭೂ ಗ್ಯಾರಂಟಿ – CM ಡಿ.ಕೆ. ಶಿವಕುಮಾರ್
ಕಾನೂನು ಪ್ರಕಾರ ದಾಖಲೆ ಸರಿ ಇದ್ದವರಿಗೆ ಭೂ ಗ್ಯಾರಂಟಿ - CM ಡಿ.ಕೆ. ಶಿವಕುಮಾರ್ ಸರ್ಕಾರ ಆರನೇ ಗ್ಯಾರಂಟಿಯಾಗಿ ಭೂ ಗ್ಯಾರಂಟಿ ನೀಡುತ್ತಿರುವುದರ ಬಗ್ಗೆ ಕೇಳಿದಾಗ, "ಈ...








