ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ 11 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತಾನಾಡಲಿದ್ದಾರೆ. ಇತ್ತೀಚಿಗೆ ಕೇಂದ್ರ ಸರಕಾರದ “ಶಿಕ್ಷಣ ಸಚಿವಾಲಯ ಹೊಸ “ರಾಷ್ಟ್ರೀಯ ಶಿಕ್ಷಣ ನೀತಿ-20″ ಜಾರಿಗೆ ತರಲಾಯಿತು. ” ಉನ್ನತ ಶಿಕ್ಷಣದಲ್ಲಿ ಸುಧಾರಣೆ ಕುರಿತಾಗಿ ಅವರು ಭಾಷಣ ಮಾಡಲಿದ್ದು ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ದೇಶದಲ್ಲಿ ಕೊರೋನಾದಿಂದ ಎದುರಾಗಿರುವ ಸಮಸ್ಯೆ, ಮುಂದಿರುವ ಸವಾಲುಗಳ ಬಗ್ಗೆ ಪ್ರಸ್ತಾಪಿ ಅವುಗಳನ್ನು ಎದುರಿಸುವ ಬಗ್ಗೆ ಹಾಗೂ ಇತರ ಪ್ರಮುಖ ವಿಚಾರಗಳ ಕುರಿತಾಗಿ ಮಾತನಾಡಲಿದ್ದಾರೆ. ಶಿಕ್ಷಣದಲ್ಲಿ ಬದಲಾವಣೆ, ಕೌಶಲ್ಯಾಭಿವೃದ್ಧಿ ವಿಚಾರಗಳ ಬಗ್ಗೆ ಮಾಹಿತಿ ಹಂಚಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.








