ಸುಶಾಂತ್ ಸಿಂಗ್ ಸಾವಿನ ಪ್ರಕರಣ ಈಗಾಗಲೇ ಸಿಬಿಐ ಅಂಗಳದಲ್ಲಿದ್ದು, 7 ಮಂದಿಯ ವಿರುದ್ಧ ದೂರು ದಾಖಲಿಸಿಕೊಂಡಿರುವ ಸಿಬಿಐ ವಿಚಾರಣೆಯನ್ನು ಆರಂಭಿಸಿದೆ. ಇದರ ನಡುವೆ ಬಿಹಾರದಿಂದ ಮಹಾರಾಷ್ಟ್ರಗೆ ಕೇಸ್ ವರ್ಗಾವಣೆ ಮಾಡುವಂತೆ ಕೋರಿ ಸುಪ್ರೀಂ ಕೋರ್ಟ್‍ಗೆ ರಿಯಾ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಇಂದು ನ್ಯಾಯಾಲಯ ನಡೆಸಿದ್ದು, ಸುಶಾಂತ್ ಸಾವಿನ ಪ್ರಕರಣದಲ್ಲಿ ಈವರೆಗೆ ತಮ್ಮ ತನಿಖೆಯ ಭಾಗವಾಗಿ ಸರ್ಕಾರ ಏನು ಮಾಡಿದೆ ಎಂದು ವಿವರವಾದ ಅಫಿಡವಿಟ್ ಸಲ್ಲಿಸುವಂತೆ ಸೂಚಿಸಿದೆ. ಈ ಹಿನ್ನೆಲೆ ಮಹಾರಾಷ್ಟ್ರ ಸರ್ಕಾರ ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಲಿದೆ ಎಂದು ಹೇಳಲಾಗಿದೆ. ಅಫಿಡವಿಟ್ ಅನ್ನು ಮೊಹರು ಕವರ್ನಲ್ಲಿ ಸಲ್ಲಿಸಬಹುದಾಗಿದೆ. ಅಷ್ಟೇ ಅಲ್ಲದೆ ಬಿಹಾರದಿಂದ ಮಹಾರಾಷ್ಟ್ರಗೆ ತನಿಖೆಗಾಗಿ ಬಂದಿದ್ದ ಐಪಿಎಸ್ ಅಧಿಕಾರಿಯನ್ನು ಬಲವಂತವಾಗಿ ಬಂಧಿಸಿದ್ದಕ್ಕಾಗಿ ನ್ಯಾಯಾಲಯ ಮಹಾರಾಷ್ಟ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಸಚಿವ ಬಿ.ನಾಗೇಂದ್ರ ರಾಜೀನಾಮೆಗಾಗಿ ಹೋರಾಟ ಮುಂದುವರಿಕೆ, ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ: ಪ್ರತಿಪಕ್ಷ ನಾಯಕ ಆರ್.ಅಶೋಕ
ಬೆಂಗಳೂರು, ಸಚಿವ ಬಿ.ನಾಗೇಂದ್ರ ರಾಜೀನಾಮೆಗಾಗಿ ಹೋರಾಟ ಮುಂದುವರಿಸಲಿದ್ದು, ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸದನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ...







