ನೀರಿನ ಹೊಂಡಕ್ಕೆ ಟಿಪ್ಪರ್ ಲಾರಿಯೊಂದು ಮುಗುಚಿ ಬಿದ್ದ ಪರಿಣಾಮ ಚಾಲಕ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉಡುಪಿಯ ಕಾರ್ಕಳ ತಾಲೂಕಿನ ಪಳ್ಳಿ-ನಿಂಜೂರಿನಲ್ಲಿ ನಡೆದಿದೆ. ಇಂದು ಸಂಜೆ ವೇಳೆಗೆ ಈ ಅನಾಹುತ ಸಂಭವಿಸಿದೆ. ಘಟನೆಯಲ್ಲಿ ಕಾರ್ಕಳ ಗಣಿತನಗರದ ನಿವಾಸಿಯಾಗಿದ್ದ ಚಾಲಕ (40) ಅರುಣ್ ಕುಮಾರ್ , ಲಾರಿಯಲ್ಲಿದ್ದ ಮತ್ತೋರ್ವ (18) ತರುಣ್ ಕಿಶೋರ್ ಎಂಬುವವರು ಮೃತಪಟ್ಟಿದ್ದಾರೆ. ಮಣ್ಣು ಲೋಡ್ ಮಾಡಿ ತರಲು ಹೊರಟಿದ್ದ ಲಾರಿ ನಿಂಜೂರು ಗ್ರಾಮದ ಬಳಿ ರಸ್ತೆಯಿಂದ ಪಕ್ಕಕ್ಕೆ ಸರಿದಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ್ದು, ನೀರು ತುಂಬಿದ್ದ ಹೊಂಡಕ್ಕೆ ಪಲ್ಟಿಯಾಗಿದೆ. ಇನ್ನೂ ಈ ಸಂಬಂಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.
ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಕಿಚ್ಚು ರಾಜ್ಯ ರಾಜಕಾರಣದಲ್ಲಿ ಇನ್ನೂ ಆರಿಲ್ಲ. ಇದರ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ಎರಡನೇ...








