ರಾಮನಗರ : ನೀರಿನ ಸಂಪ್ ಗೆ ಬಿದ್ದು ಪೊಲೀಸ್ ಕಾನ್ ಸ್ಟೆಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರದ ಚನ್ನಪಟ್ಟಣದಲ್ಲಿ ಇಂದು ನಡೆದಿದೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಾನ್ ಸ್ಟೆಬಲ್ ಆಗಿದ್ದ 30 ವರ್ಷದ ರವಿ ಬಿರಾದಾರ್ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.
ಇವರು ಎರಡು ವರ್ಷಗಳ ಹಿಂದೆ ಕಾನ್ ಸ್ಟೆಬಲ್ ಆಗಿ ಸೇವೆಗೆ ಸೇರಿದ್ದರು. ಬಿಜಾಪುರ ಸಿಂದಗಿ ಮೂಲದವರಾಗಿದ್ದ ರವಿ, ಗ್ರಾಮಾಂತರ ಪೊಲೀಸ್ ಠಾಣೆ ಪಕ್ಕದಲ್ಲಿರುವ ಪೊಲೀಸ್ ವಸತಿ ಗೃಹದಲ್ಲಿ ವಾಸವಿದ್ದರು. ವಸತಿ ಗೃಹದಲ್ಲೇ ಇದ್ದ ನೀರಿನ ಸಂಪ್ ನಲ್ಲಿ ಬಿದ್ದು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದ್ರೆ ಇವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವೈಯಕ್ತಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಈ ಸಂಬಂಧ ಚನ್ನಪಟ್ಟಣ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








