ರಾಜನಗರ : ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಭರಚುಕ್ಕಿ ಜಲಪಾತ ಪ್ರದೇಶಕ್ಕೆ ಪ್ರವಾಸಿಗರಿಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಪ್ರಸ್ತಾವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಶನಿವಾರ ಭರಚುಕ್ಕಿಗೆ ಭೇಟಿ ಪರಿಶೀಲನೆ ನಡೆಸಿದರು.
ಜಿಲ್ಲೆಯಲ್ಲಿ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾಗಿರುವ ಭರಚುಕ್ಕಿಗೆ ಹೆಚ್ಚಿನ ಪ್ರವಾಸಿಗರು ಭೇಟಿ ಕೊಡುತ್ತಿದ್ದರು. ಕೋವಿಡ್ ಹಿನ್ನೆಲೆಯಲ್ಲಿ ಸದ್ಯಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಬದಲಾದ ಪರಿಸ್ಥಿತಿಯಲ್ಲಿ ಭರಚುಕ್ಕಿಗೆ ಪ್ರವೇಶಕ್ಕೆ ಅನುಕೂಲ ಮಾಡಕೊಡಬೇಕೆಂಬ ಪ್ರಸ್ತಾವ ಬಂದಿದೆ. ಜಿಲ್ಲಾ ಉಸ್ತುವಾರಿ ಸಚಿವರು ನಡೆಸಿದ ಸಭೆಯ ವೇಳೆಯೂ ವಿಷಯ ಚರ್ಚೆಗೆ ಬಂದಿದೆ. ಹೀಗಾಗಿ ಜಿಲ್ಲಾಧಿಕಾರಿಗಳು ಭರಚುಕ್ಕಿಗೆ ಭೇಟಿ ನೀಡಿ ಅಧಿಕಾರಿಗಳೊಂದಿ ಚರ್ಚೆ ನಡೆಸಿದರು.
ಬಳಿಕ ಭರಚುಕ್ಕಿ ವ್ಯಾಪ್ತಿಯಲ್ಲಿ ಬರುವ ದರ್ಗಾಕ್ಕೂ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಪರಿಶೀಲನೆ ನಡೆಸಿ ಸದರಿ ಪ್ರದೇಶದಲ್ಲಿ ಸುರಕ್ಷತೆಗಾಗಿ ಅಳವಡಿಸಿರುವ ಕಬ್ಬಿಣದ ತಡೆಗೋಡೆಗಳನ್ನು ದುರಸ್ಥಿಗೊಳಿಸುವಂತೆ ಸೂಚಿಸಿದರು. ದರ್ಗಾದಲ್ಲಿ ಪ್ರಾರ್ಥನೆಗೆ ಅವಕಾಶ ಇದೆ ಹೊರತು ವಾಸ್ತವ್ಯಕ್ಕೆ ಅವಕಾಶ ನೀಡುವಂತಿಲ್ಲ. ಸ್ವಚ್ಚತೆ ಕಾಪಾಡಿಕೊಳ್ಳಬೇಕು. ಹೆಚ್ಚು ಆರೋಗ್ಯ ಸುರಕ್ಷತಾ ಕ್ರಮಗಳಿಗೆ ಒತ್ತು ನೀಡಬೇಕೆಂದು ತಿಳಿಸಿದರು.
ಈ ವೇಳೆ ಉಪವಿಭಾಗಾಧಿಕಾರಿ ನಿಖಿತಾ ಎಂ. ಚಿನ್ನಸ್ವಾಮಿ, ತಹಶೀಲ್ದಾರ್ ಕೆ. ಕುನಾಲ್, ಅರಣ್ಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.








