ಕರ್ನಾಟಕದಲ್ಲಿ ಕೊರೋನಾ ಭೀತಿಯ ನಡುವೆಯೂ ಯಶಸ್ವಿಯಾಗಿ ನಡೆದಿದ್ದ ಎಸ್. ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಇಂದು ಮಧ್ಯಾಹ್ನ 3. 00 ಗಂಟೆಗೆ ಪ್ರಕಟಗೊಳ್ಳಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದು, ಎಸ್.ಎಸ್.ಎಲ್.ಸಿ ಫಲಿತಾಂಶವು ಕರ್ನಾಟಕ ಮಾಧ್ಯಮಿಕ ಶಿಕ್ಷಣ ಪರೀಕ್ಷಾ ಮಂಡಳಿಯ (ಕೆಎಸ್‌ಇಇಬಿ) ಅಧಿಕೃತ ವೆಬ್‌ಸೈಟ್ karresults.nic.in ನಲ್ಲಿ ಪ್ರಕಟವಾಗಲಿದೆ ಮತ್ತು ವಿದ್ಯಾರ್ಥಿಗಳ ಮೊಬೈಲ್ಗೆ ಎಸ್.ಎಂ.ಎಸ್. ಮೂಲಕ ಫಲಿತಾಂಶ ಬರಲಿದೆ ಎಂದು ಮಾಹಿತಿ ನೀಡಿದ್ದಾರೆ.
ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಈ ಬಾರಿ ವಿದ್ಯಾರ್ಥಿಗಳ ಮೊಬೈಲ್ಗೆ ಎಸ್.ಎಂ.ಎಸ್. ಮೂಲಕ ಫಲಿತಾಂಶ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಪೂರಕ ಪರೀಕ್ಷೆಯು ಸೆಪ್ಟೆಂಬರ್ನಲ್ಲಿ ನಡೆಸಲಾಗುವುದು ಎಂದು ಅವರು ತಿಳಿಸಿದರು.
ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಕೆಎಸ್‌ಇಇಬಿ ಅಧಿಕೃತ ವೆಬ್‌ಸೈಟ್ karresults.nic.in ನಲ್ಲಿ ವೀಕ್ಷಿಸುವ ವಿಧಾನ :
ಹಂತ 1: ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ಅಂದರೆ.
karresults.nic.in
ಹಂತ 2: ಎಸ್‌ಎಸ್‌ಎಲ್‌ಸಿ ಫಲಿತಾಂಶ 2020 ಕರ್ನಾಟಕ ಮಂಡಳಿಯ ಮೇಲೆ ಕ್ಲಿಕ್ ಮಾಡಿ
ಹಂತ 3: ನಿಮ್ಮ ಪರೀಕ್ಷೆಯ ರೋಲ್ ಸಂಖ್ಯೆ ಮತ್ತು ಇತರ ವಿವರಗಳನ್ನು ಸಲ್ಲಿಸಿ
ಹಂತ 4: ನಿಮ್ಮ ಎಸ್‌ಎಸ್‌ಎಲ್‌ಸಿ ಫಲಿತಾಂಶ 2020 ಅನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ
ಹಂತ 6: ಪಿಡಿಎಫ್ ಡೌನ್‌ಲೋಡ್ ಮಾಡಿ ಮತ್ತು ಪ್ರಿಂಟ್ ಔಟ್ ತೆಗೆದುಕೊಳ್ಳಿ








