ಸೆಪ್ಟಂಬರ್ 1ರಿಂದ ಶಾಲೆಗಳನ್ನು ಪುನರಾರಂಭಿಸಲು ಕೇಂದ್ರ ಆರೋಗ್ಯ ಇಲಾಖೆಯ ಒಪ್ಪಿಗೆ ಇಲ್ಲ
ದೇಶಾದ್ಯಂತ ಸೆಪ್ಟಂಬರ್ 1ರಿಂದ ಶಾಲೆಗಳನ್ನು ಪುನರಾರಂಭಿಸುವ ಚಿಂತನೆಗೆ ಕೇಂದ್ರ ಆರೋಗ್ಯ ಇಲಾಖೆ ಸಹಮತ ವ್ಯಕ್ತಪಡಿಸಿಲ್ಲ ಎಂದು ವರದಿಗಳು ತಿಳಿಸಿವೆ.
ಈ ಮೊದಲು ಸೆಪ್ಟೆಂಬರ್ 1 ರಿಂದ ಶಾಲೆ ಪುನರಾರಂಭಿಸುವ ಬಗ್ಗೆ ಕೇಂದ್ರ ಮಾನವ ಸಂಪದಭಿವೃದ್ಧಿ ಇಲಾಖೆಯು ಚಿಂತನೆ ನಡೆಸಿತ್ತು, ಆದರೆ ಇದಕ್ಕೆ ಸಹಮತ ವ್ಯಕ್ತಪಡಿಸದ ಕೇಂದ್ರ ಆರೋಗ್ಯ ಇಲಾಖೆಯು ಅಗಸ್ಟ್ 30ರ ವೇಳೆಗೆ ಕೋವಿಡ್-19 ಸೋಂಕಿತರ ಸಂಖ್ಯೆಯು 30 ಲಕ್ಷ ಗಡಿ ಮುಟ್ಟುವ ನಿರೀಕ್ಷೆಯಿದೆ. ಹಾಗಾಗಿ ವಿದ್ಯಾರ್ಥಿಗಳ ಮತ್ತು ಶಿಕ್ಷಕರ ಹಿತದೃಷ್ಟಿಯಿಂದ ಸೆಪ್ಟೆಂಬರ್ 1ರಿಂದ ಶಾಲೆ ಪುನರಾರಂಭಿಸುವುದು ಸೂಕ್ತವಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.
ವಿದೇಶಗಳಲ್ಲಿ ಕೂಡ ಶಾಲೆ, ಕಾಲೇಜು ಪುನರಾರಂಭಿಸಿದ ಬಳಿಕ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಸೋಂಕು ಹರಡಿ ಪರಿಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಪುನಃ ಶಾಲೆಗಳನ್ನು ಮುಚ್ಚಬೇಕಾಯಿತು. ಈ ರೀತಿಯ ಉದಾಹರಣೆಗಳು ನಮ್ಮ ಮುಂದಿರುವಾಗ ಸೆಪ್ಟೆಂಬರ್ 1 ರಿಂದ ಶಾಲೆ ಪುನರಾರಂಭಿಸುವುದು ಸೂಕ್ತವಲ್ಲ ಎಂದು ಆರೋಗ್ಯ ಇಲಾಖೆ ಹೇಳಿದೆ.








