ಬೆಂಗಳೂರು : ಹೆಮ್ಮಾರಿ ಕೊರೊನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಈಗ ಸಂಪೂರ್ಣವಾಗಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ನಾಳೆ ಅವರು ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ಆಗಸ್ಟ್ 2 ರಂದ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿತ್ತು. ಅವರನ್ನು ಕೂಡಲೇ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರ ಕೋವಿಡ್ ವರದಿ ನೆಗೆಟಿವ್ ಬಂದಿದ್ದು, ನಾಳೆ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
10 ದಿನಗಳ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿರುವ ಸಿಎಂ ಮುಂಜಾಗ್ರತಾ ಕ್ರಮವಾಗಿ ಕೆಲ ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲೇ ಇರಲಿದ್ದಾರೆ ಎಂದು ಸಿಎಂ ಆಪ್ತ ಮೂಲಗಳು ತಿಳಿಸಿವೆ.








