ಕಲಬುರಗಿ : ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಜಿ.ರಾಮಕೃಷ್ಣ ಅವರು ಭಾನುವಾರ ನಿಧನರಾಗಿದ್ದಾರೆ. ಅನಾರೋಗ್ಯ ಕಾರಣದಿಂದಾಗಿ ಇತ್ತೀಚಿಗಷ್ಟೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಆಸ್ಪತ್ರೆಯಿಂದ ವಾಪಸಾಗಿ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದ ಅವರು ತಮ್ಮ ನಿವಾಸದಲ್ಲೇ ಕೊನೆಯುಸಿರೆಳೆದಿದ್ದಾರೆ.
ನಾಲ್ಕು ಬಾರಿ ಶಾಸಕರಾಗಿದ್ದ ಜಿ.ರಾಮಕೃಷ್ಣ ಅವರು, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಸಂಪುಟದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಕಮಲಾಪುರ, ಕಲಬುರ್ಗಿ ಗ್ರಾಮೀಣ ಕ್ಷೇತ್ರಗಳನ್ನು ಇವರು ಪ್ರತಿನಿಧಿಸಿದ್ದರು. ಸದ್ಯ ರಾಮಕೃಷ್ಣ ಅವರ ಮನೆಯಲ್ಲಿ ನೀರವ ಮೌನ ಆವರಿಸಿದ್ದು, ಮಧ್ಯಾಹ್ನ 3 ಗಂಟೆಯ ನಂತರ ಅವರ ಅಂತ್ಯಕ್ರಿಯೆ ನೆರವೇರಲಿದೆ.
ಮಾಜಿ ಸಚಿವ ವಿ.ರಾಮಕೃಷ್ಣ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದು, ‘ವಿ.ರಾಮಕೃಷ್ಣ ಅವರು ಪಕ್ಷಕ್ಕೆ ಅವರ ಸೇವೆ ಅಪಾರವಾಗಿದ್ದು, ಅವರ ಅಗಲಿಕೆ ಸುದ್ದಿ ಕೇಳಿ ಬೇಸರವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.








