ಬೆಂಗಳೂರು : ಹೆಚ್.ಎಸ್. ದೊರೆಸ್ವಾಮಿ ಅವರನ್ನು ಕ್ರಿಮಿನಲ್ ರೀತಿ ಬಿಂಬಿಸಲು ಮುಂದಾಗಿರುವುದು ಸರಿಯಲ್ಲ. ಅವರು ಸ್ವಾತಂತ್ರ‍್ಯ ಹೋರಾಟಗಾರರಲ್ಲ ಎಂದರೆ ಮತ್ಯಾಕೆ ಪಿಂಚಣಿ ಕೊಡುತ್ತಿದ್ದೀರಿ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಯತ್ನಾಳ್ ಹಾಗೂ ಬಿಜೆಪಿ ವಿರುದ್ಧ ಕಿಡಿಕಾರಿದರು. ದೊರೆಸ್ವಾಮಿ ಅವರ ಸೇವೆ ಮತ್ತು ಅವರು ನೀಡಿರುವ ಕೊಡುಗೆಗಳನ್ನು ಪ್ರತಿಯೊಬ್ಬರು ಸ್ಮರಿಸಬೇಕು. ಬರೀ ಯತ್ನಾಳ್ ಹೇಳಿಕೆ ಮಾತ್ರವಲ್ಲ. ಇಡೀ ಬಿಜೆಪಿ ನಾಯಕರು ಅವರ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದರು.
ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ
ಬಾಗಲಕೋಟೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕೆಂದರೆ ಪಕ್ಷದಿಂದ ದೂರವಾಗಿರುವ ಬಂಡಾಯ ನಾಯಕರನ್ನು ಮತ್ತೆ ಮನೆಗೆ ಕರೆತರುವುದು ಅನಿವಾರ್ಯ ಎಂದು ಮಾಜಿ ಸಚಿವ ಮುರುಗೇಶ...








