ಬೆಳಗಾವಿ : ಮಹಾರಾಷ್ಟ್ರ ಗಡಿಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜಿಲ್ಲೆಯ ಎಲ್ಲ ನದಿಗಳು ಮೈದುಂಬಿ ಹರಿಯುತ್ತಿವೆ. ಪರಿಣಾಮ ಹುಕ್ಕೇರಿಯ ಶಿರೂರು ಡ್ಯಾಂ ಸಂಪೂರ್ಣ ಭರ್ತಿಯಾಗಿದ್ದು, ನಾಲ್ಕು ಗೇಟ್ ಗಳಿಂದ ನೀರನ್ನು ಹೊರ ಬಿಡಲಾಗುತ್ತಿದೆ.
ಮಾರ್ಕಂಡೆಯ ನದಿಗೆ ಅಡ್ಡಲಾಗಿ ಈ ಡ್ಯಾಂ ನಿರ್ಮಿಸಲಾಗಿದ್ದು, 3.69 ಟಿಎಂಸಿ ಸಂಗ್ರಹ ಸಾಮರ್ಥ್ಯವಿದೆ. ಸದ್ಯ ಡ್ಯಾಂಗೆ 5000 ಟಿಎಂಸಿ ನೀರು ಒಳ ಹರಿವಿದ್ದು, ಅಷ್ಟೇ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ. ಇದು ನದಿ ಪಾತ್ರದ ಜನರಲ್ಲಿ ಆತಂಕ ಮನೆ ಮಾಡಲು ಕಾರಣವಾಗಿದೆ.
ಇನ್ನುಳಿದಂತೆ ಜಿಲ್ಲೆಯ ಎಲ್ಲ ನದಿಗಳು ಉಕ್ಕಿ ಹರಿಯುತ್ತಿದ್ದು, ಬಹುತೇಕ ಎಲ್ಲ ಜಲಾಶಯಗಳಿಂದ ನೀರು ಹೊರ ಬಿಡಲಾಗುತ್ತಿದೆ. ಹೀಗಾಗಿ ಅಲ್ಲಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.








