ಬಸ್ಸೊಂದರಲ್ಲಿ ಹಿಂದಿನ ಸೀಟಿನಲ್ಲಿ ಕುಳಿತಿದ್ದ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣದ ಆರೋಪಿ ವಿಚಾರಣೆ ಸಂದರ್ಭ ಠಾಣೆಯಿಂದ ಪರಾರಿಯಾಗಿದ್ದಾನೆ.
ಸುಳ್ಯ ಕಡೆಯಿಂದ ಬರುತ್ತಿದ್ದ ಕೆಎಸ್ಆರ್ ಟಿಸಿ ಬಸ್ಸಿಗೆ ಹತ್ತಿ ಹಿಂದಿನ ಸೀಟಿನಲ್ಲಿ ಕುಳಿತಿದ್ದ ವಿದ್ಯಾರ್ಥಿನಿಗೆ ಯುವಕನೊಬ್ಬ ಕಿರುಕುಳ ನೀಡಲು ಯತ್ನಿಸಿದ್ದಾನೆ. ಇದನ್ನು ಆಕ್ಷೇಪಿಸಿದ ವಿದ್ಯಾರ್ಥಿನಿ ತಕ್ಷಣ ಸಹ ಪ್ರಯಾಣಿಕರು ಹಾಗೂ ಬಸ್ ನ ನಿರ್ವಾಹಕರಿಗೆ ಮಾಹಿತಿ ನೀಡಿದ್ದಾಳೆ.
ಸಂಪ್ಯದಲ್ಲಿರುವ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ ಬಳಿ ಬರುತ್ತಿದ್ದಂತೆ ಬಸ್ಸನ್ನು ನಿಲ್ಲಿಸಿದ ಚಾಲಕ ಅದರಲ್ಲಿದ್ದ ಇತರ ಪ್ರಯಾಣಿಕರು ಹಾಗೂ ನಿರ್ವಾಹಕನ ನೆರವಿನಿಂದ ಯುವಕನನ್ನು ಪೊಲೀಸರಿಗೆ ಒಪ್ಪಿಸಿ ವಿದ್ಯಾರ್ಥಿನಿ ದೂರು ನೀಡಿದ್ದಾಳೆ.
ಠಾಣೆಯಲ್ಲಿದ್ದ ಮಹಿಳಾ ಪೊಲೀಸರು ವಿಚಾರಣೆ ನಡೆಸುತ್ತಿದ್ದಂತೆ ಆರೋಪಿ ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾನೆ. ತಕ್ಷಣವೇ ಸ್ಥಳೀಯರು ರಿಕ್ಷಾ ಹಾಗೂ ಬೈಕ್ ನಲ್ಲಿ ಬೆನ್ನಟ್ಟಿದ್ದಾರೆ. ಆದರೆ ವಿಷ್ಣುಮೂರ್ತಿ ದೇವಸ್ಥಾನದ ರಸ್ತೆಯಲ್ಲಿ ಓಟಕ್ಕಿತ್ತ ಯುವಕ ತಪ್ಪಿಸಿಕೊಂಡು ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾನೆ. ವಿದ್ಯಾರ್ಥಿನಿ ಮೌಖಿಕ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ಅಲ್ಲಿಗೆ ಮುಕ್ತಾಯಗೊಂಡಿದೆ.
ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ
ಹಾರ್ಮುಜ್ ಜಲಸಂಧಿಯನ್ನು ಹಿಡಿತದಲ್ಲಿಡುವ ವಿಚಾರದಲ್ಲಿ ಅಮೆರಿಕ & ಇರಾನ್ ನಡುವಿನ ಉದ್ವಿಗ್ನತೆ ತಾರಕ್ಕೇರಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾರ್ಮುಜ್ ಪ್ರದೇಶದ ಪ್ರಮುಖ ಬಂದರುಗಳಿಗೆ ದಿಗ್ಬಂಧನ (Blockade)...








