ದೇಶಾದ್ಯಂತ ಮಹಾಮಾರಿ ಕೊರೊನಾ ಹಾವಳಿ ಮುಂದುವರೆದಿದೆ. ಒಂದೇ ದಿನ ದೇಶದಲ್ಲಿ ಕೊರೊನಾ ಸ್ಫೋಟವಾಗಿದ್ದು, ಹೊಸದಾಗಿ 62,064 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 22,15,075ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 1,007 ಮಂದಿ ಕಿಲ್ಲರ್ ಕೊರೊನಾಗೆ ಪ್ರಾಣ ಕಳೆದುಕೊಂಡಿದ್ದಾರೆ. ಇದರೊಂದಿಗೆ ಒಟ್ಟು ಮೃತಪಟ್ಟವರ ಸಂಖ್ಯೆ 44,386ಕ್ಕೆ ಬಂದು ತಲುಪಿದೆ. ಇನ್ನೂ ಗುಣಮುಖರಾದವರ ಸಂಖ್ಯೆಯಲ್ಲೂ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಇದುವರೆಗೂ ಒಟ್ಟು 14,27,006 ಸೋಂಕಿತರು ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ ದೇಶದಲ್ಲಿ ಒಟ್ಟು 6,34,945 ಸಕ್ರಿಯ ಕೇಸ್ ಗಳಿವೆ.
ವಿದ್ಯಾರ್ಥಿನಿಯರಿಂದ ಹಾಸ್ಟೇಲ್ ಗೆ ಎಂಟ್ರಿ ಕೊಟ್ಟ 100 ಕೆಜಿ ತೂಕ, 17 ಅಡಿ ಉದ್ದದ ಹೆಬ್ಬಾವು
ಅಸ್ಸಾಂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯರ ಹಾಸ್ಟೆಲ್ ಗೆ ದೈತ್ಯ ಹೆಬ್ಬಾವೊಂದು ಬಂದಿರುವ ಘಟನೆ ನಡೆದಿದ್ದು, ವಿದ್ಯಾರ್ತಿನಿಯರು ಬೆಚ್ಚಿ ಬಿದ್ದಿದ್ದಾರೆ. ಸುಮಾರು 100 ಕೆಜಿ ತೂಕ ಹಾಗೂ 17 ಅಡಿ...