ಕೊರೊನಾ ಪಾಸಿಟಿವ್ ಇರುವುದು ಧೃಡವಾದ ಬಳಿಕ ಇಷ್ಟುದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿಎಂ ಬಿ. ಎಸ್ ಯಡಿಯೂರಪ್ಪ ಅವರು ಇದೀಗ ಸಂಪೂರ್ಣವಾಗಿ ಗುಣಮುಖರಾಗಿದ್ದು, ಇಂದು ಸಂಜೆ 4 ಗಂಟೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
ಆಗಸ್ಟ್ 2ರಂದು ಕೊರೋನಾ ಪಾಸಿಟೀವ್ ಬಂದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಕುರಿತಂತೆ ಆಸ್ಪತ್ರೆ ಮೂಲಗಳಿಂದ ಮಾಹಿತಿ ತಿಳಿದು ಬಂದಿದ್ದು, ಕಳೆದ 9 ದಿನಗಳಿಂದ ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದ ಸಿಎಂ ಯಡಿಯೂರಪ್ಪ ಅವರು ಇದೀಗ ಗುಣಮುಖರಾಗಿದ್ದಾರೆ. ಮತ್ತೆ ವೈದ್ಯಕೀಯ ಪರೀಕ್ಷೆಗೆಒಳಪಡಿಸಿದ ವೇಳೆ ಸಿಎಂ ಬೆಸ್ ವೈ ಅವರ ಕೊರೊನಾ ರಿಪೋರ್ಟ್ ನೆಗೆಟಿವ್ ಬಂದಿದೆ ಎನ್ನಲಾಗಿದೆ. ಹೀಗಾಗಿ ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದು, ರಾಜಾಹುಲಿ ಬೆಂಬಲಿಗರಲ್ಲಿ ಸಂತಸ ಮನೆ ಮಾಡಿದೆ.
ಪವರ್ ಶೇರಿಂಗ್ ಜಂಜಾಟದಲ್ಲಿ ಮುಳುಗಿದ ಕೈ ಪಡೆ; ಕತ್ತಲಲ್ಲಿ ಕರಡಿಯನ್ನು ಹುಡುಕುತ್ತಿರುವ DCM – ಪ್ರತಿಪಕ್ಷ ನಾಯಕ ಆರ್.ಅಶೋಕ ವ್ಯಂಗ್ಯ
ಬೆಂಗಳೂರು,ಜನವರಿ 13:ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಪತ್ತೆ ಮಾಡಬೇಕೇ ಹೊರತು ಒಬ್ಬ ವ್ಯಕ್ತಿಯನ್ನು ಕಾಟಾಚಾರಕ್ಕೆ ಬಂಧಿಸುವುದಲ್ಲ. ಪೊಲೀಸರು ಇದರ ಹಿಂದಿರುವವರನ್ನು...