ಇಂದು ಆಯ್ದ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಹೊಸದಿಲ್ಲಿ, ಅಗಸ್ಟ್ 11: ಪ್ರಧಾನಿ ನರೇಂದ್ರ ಮೋದಿ ಅವರು ಆಯ್ದ ರಾಜ್ಯಗಳೊಂದಿಗೆ ಇಂದು ಕೋವಿಡ್ -19 ಸಾಂಕ್ರಾಮಿಕ ಪರಿಸ್ಥಿತಿ ಸಂಬಂಧಿಸಿ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.
ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸುವುದಿಲ್ಲ. ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮಾತ್ರ ಈ ಸಭೆಯಲ್ಲಿ ಭಾಗವಹಿಸುತ್ತಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಧಾನಮಂತ್ರಿ, ಮುಖ್ಯಮಂತ್ರಿಗಳ ಜೊತೆಗೆ ಪರಿಸ್ಥಿತಿಯನ್ನು ನಿಭಾಯಿಸುವ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ. ಜೊತೆಗೆ ದೇಶವನ್ನು ಅನ್ಲಾಕ್ ಮಾಡುವ ಬಗ್ಗೆಯೂ ಅವರು ಚರ್ಚಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಸಿನೆಮಾ ಮಂದಿರ ಮತ್ತು ಇತರ ಸ್ಥಳಗಳು, ಮೆಟ್ರೋ ರೈಲು ಮತ್ತು ಶಿಕ್ಷಣ ಸಂಸ್ಥೆಗಳನ್ನು ತೆರೆಯುವುದನ್ನು ಒಳಗೊಂಡಂತೆ ಮತ್ತಷ್ಟು ನಿರ್ಬಂಧಗಳನ್ನು ಸಡಿಲಗೊಳಿಸುವ ಬಗ್ಗೆ ಮೋದಿ ಮುಖ್ಯಮಂತ್ರಿಗಳ ಅಭಿಪ್ರಾಯಗಳನ್ನು ಪಡೆಯಬಹುದು ಎನ್ನಲಾಗಿದೆ.
ಆದಾಗ್ಯೂ, ಪ್ರಧಾನಿ ಉಳಿದ ರಾಜ್ಯಗಳೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ಸಾಧ್ಯತೆಯೂ ಇದೆ ಎನ್ನಲಾಗಿದೆ.








