ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸ್ಥಿತಿ ಗಂಭೀರ
ಹೊಸದಿಲ್ಲಿ, ಅಗಸ್ಟ್ 11: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದು ಅದನ್ನು ತೆಗೆದುಹಾಕಲು ಶಸ್ತ್ರಚಿಕಿತ್ಸೆ ನಡೆಸಿದ ನಂತರ ಅವರ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ನಲ್ಲಿಟ್ಟು ಚಿಕಿತ್ಸೆ ಮುಂದುವರಿಸಲಾಗುತ್ತಿದೆ.
ಅವರನ್ನು ಕೋವಿಡ್ -19 ಪರೀಕ್ಷೆಗೆ ಒಳಪಡಿಸಿದಾಗ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಈ ಬಗ್ಗೆ ಟ್ವೀಟ್ ಮಾಡಿದ್ದ 84 ವರ್ಷದ ಪ್ರಣಬ್ ಮುಖರ್ಜಿ , ನಾನು ಬೇರೆ ಕಾರಣಕ್ಕಾಗಿ ಆಸ್ಪತ್ರೆಗೆ ದಾಖಲಾಗಿದ್ದೆ. ಆದರೆ ಕೊವಿಡ್-19 ಟೆಸ್ಟ್ಗೆ ಒಳಗಾದಾಗ ಅದರ ವರದಿ ಪಾಸಿಟಿವ್ ಬಂದಿದೆ ಎಂದು ಹೇಳಿದ್ದರು.

ಸೈನ್ಯದ (ರಿಸರ್ಚ್ ಮತ್ತು ರೆಫರಲ್) ಆಸ್ಪತ್ರೆಯ ಮೂಲಗಳು, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಆದರೆ ಶಸ್ತ್ರಚಿಕಿತ್ಸೆಯ ನಂತರ ಕೆಲವೇ ಗಂಟೆಗಳ ಕಾಲ ನಿರ್ಣಾಯಕವಾಗಿರುತ್ತದೆ. ಅವರಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವೆಂಟಿಲೇಟರ್ ಬೆಂಬಲದ ಅಗತ್ಯವಿದೆ ಎಂದು ಹೇಳಿದೆ.
ಮಾಹಿತಿಗಳ ಪ್ರಕಾರ ಆರ್ಮಿ ರಿಸರ್ಚ್ ಆಯಂಡ್ ರೆಫರಲ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ನಲ್ಲಿ ಅವರನ್ನು ಇಡಲಾಗಿದೆ.








