ಚಾಮರಾಜನಗರ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷರಾದ ಹೊನ್ನೂರು ಪ್ರಕಾಶ ನೇತೃತ್ವದಲ್ಲಿ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಲಾಗಿದೆ. ಸರ್ಕಾರದ ನೀತಿಯನ್ನು ಖಂಡಿಸಿ ರೈತ ಸಂಘದ ಕಾರ್ಯಕರ್ತರು ಜಿಲ್ಲಾ ಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಹಲವಾರು ದಿನಗಳಿಂದ ಸರ್ಕಾರ ಹಾಗೂ ಜಿಲ್ಲಾಡಳಿತ ಮುಂದೆ ಹಲವಾರು ಬೇಡಿಕೆಗಳನ್ನು ಇಟ್ಟು ಈಡೇರಿಸುವಂತೆ ಎಷ್ಟೇ ಒತ್ತಾಯಿಸಿದ್ರು ಈ ಬಗ್ಗೆ ತಲೆ ಕೆಡಿಸಿಕೊಳ್ಳದ ಹಿನ್ನೆಲೆ ಇಂದು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಪ್ರಮುಖವಾಗಿ ರೈತ ವಿರೋಧಿ ಕಾನೂನುಗಳು, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ , ತೆರಕಣಾಂಬಿ ಪ್ರಥಮ ದರ್ಜೆ ಕಾಲೇಜು ಸ್ಥಳಾಂತರವನ್ನು ರದ್ದು ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಹೀಗಾಗಿ ವಿರೋಧಿ ಚಳುವಳಿ ನಡೆಸಿದ ರೈತರನ್ನು ಜಿಲ್ಲಾಡಳಿತ ಭವನ ಮುಂದೆ ಪೋಲಿಸರು ಬಂಧಿಸಿದ್ದಾರೆ
ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು
ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ-ರಾಜಕಾರಣಿ ವಿಜಯ್ ಭಾರೀ ಸಂಚಲನ ಸೃಷ್ಟಿಸಿದ್ದಾರೆ. ಅವರು ಸ್ಪರ್ಧಿಸಿದ ಎರಡು ಕ್ಷೇತ್ರಗಳಾದ ಪೆರಂಬೂರು ಮತ್ತು ತಿರುಚಿ ಈಸ್ಟ್ನಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪೆರಂಬೂರಿನಲ್ಲಿ...








