ನವದೆಹಲಿ : ಕೊರೊನಾ ವೈರಸ್ ನಿಂದಾಗಿ ನಗರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಮತ್ತು ಬಡವರಿಗೆ ಸಹಾಯ ಮಾಡಲು ಮನ್ರೇಗಾ ಮತ್ತು ನ್ಯಾಯ್ ನಂತಹ ಯೋಜನೆಗಳನ್ನ ಕಾರ್ಯಗತಗೊಳಿಸುವ ಅಗತ್ಯವಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.
ನಿರುದ್ಯೋಗ ಸಮಸ್ಯೆ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಕೋವಿಡ್ ಬಿಕ್ಕಟ್ಟಿನಿಂದಾಗಿ ನಗರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆಗೆ ಪರಿಹಾರವಾಗಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (MGNREGA) ತನ್ನ ವ್ಯಾಪ್ತಿಯ ವಿಸ್ತರಿಸುವ ಅವಶ್ಯಕತೆ ಇದೆ. ಹಾಗೆಯೇ ಬಡ ಜನರಿಗೆ ನೆರವಾಗಲು ನ್ಯಾಯ್ (NYAY-Nyuntam Aay Yojana) ಈ ಎರಡು ಯೋಜನೆಗಳನ್ನು ಅನುಷ್ಠಾನಕ್ಕೆ ತರುವುದು ಸದ್ಯದ ಅವಶ್ಯಕತೆಯಾಗಿದೆ. ಈ ಯೋಜನೆಗಳನ್ನು ಕಾರ್ಯಗತಗೊಳಿಸುವುದರಿಂದ ಆರ್ಥಿಕತೆ ಸುಧಾರಿಸುತ್ತದೆ ಎಂದು ಬರೆದುಕೊಂಡಿದ್ದಾರೆ.
ಜೊತೆಗೆ ಸೂಟು – ಬೂಟು – ಲೂಟಿ ಸರ್ಕಾರಕ್ಕೆ ಬಡವರ ನೋವು ಅರ್ಥಮಾಡಿಕೊಳ್ಳಲು ಸಾಧ್ಯವೇ? ಎಂದು ಕೇಳಿರುವ ರಾಗಾ, ಮನ್ರೇಗಾ ಬೇಡಿಕೆ ಹೆಚ್ಚಳದ ಕುರಿತ ಗ್ರಾಫ್ ಒಂದನ್ನು ಹಂಚಿಕೊಂಡಿದ್ದಾರೆ.
शहर में बेरोज़गारी की मार से पीड़ितों के लिए MGNREGA जैसी योजना और देशभर के ग़रीब वर्ग के लिए NYAY लागू करना आवश्यक हैं। ये अर्थव्यवस्था के लिए भी बहुत फ़ायदेमंद होगा।
क्या सूट-बूट-लूट की सरकार ग़रीबों का दर्द समझ पाएगी? pic.twitter.com/jR6mqI96S7
— Rahul Gandhi (@RahulGandhi) August 11, 2020








