ಬೆಂಗಳೂರು : ಇಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್, ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ಸೇರಿದಂತೆ ಮುಂತಾದ ಕ್ರಿಕೆಟ್ ತಾರೆಯರು ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.
ಸಚಿನ್ ತೆಂಡುಲ್ಕರ್ ಟ್ವೀಟ್ ಮಾಡಿ, ಕೊಳಲು, ನವಿಲುಗರಿ ಮತ್ತು ಬೆಣ್ಣೆ ಹೊಂದಿರುವ ಮಡಕೆಯ ಚಿತ್ರದೊಂದಿಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.
ಕನ್ನಡಿಗ ಅನಿಲ್ ಕುಂಬ್ಳೆ ಅವರು ‘ಎಲ್ಲರಿಗೂ ಗೋಕುಲಾಷ್ಟಮಿಯ ಶುಭಾಶಯಗಳು’ ಎಂದು ಕನ್ನಡದಲ್ಲೇ ಬರೆದು ಶುಭಾಶಯ ತಿಳಿಸಿದ್ದಾರೆ.
ಟೀಮ್ ಇಂಡಿಯಾ ಕೋಚ್ ರವಿಶಾಸ್ತ್ರಿ ಅವರು, ಜನ್ಮಾಷ್ಟಮಿಯ ಹಿನ್ನೆಲೆಯಲ್ಲಿ ಕೃಷ್ಣ ದೇವರು ಎಲ್ಲರ ಜೀವನಕ್ಕೆ ಒಳ್ಳೆಯದು ಮಾಡಲಿ ಎಂದು ಹಾರೈಸಿದ್ದಾರೆ.








