ನವದೆಹಲಿ : ಬೆಂಗಳೂರಿನಲ್ಲಿ ಪುಂಡರ ಪುಂಡಾಟ ಪ್ರಕರಣ ದೇಶದಾದ್ಯಂತ ಭಾರಿ ಸದ್ದು ಮಾಡುತ್ತಿದ್ದು, ಹಿಂಸಾಚಾರಕ್ಕೆ ಕಾರಣವಾದ ಪ್ರಚೋದನಾಕಾರಿ ಪೋಸ್ಟ್ ನ ಮೂಲ ಪತ್ತೆಗೆ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಬೆಂಗಳೂರಿನಲ್ಲಿ ಕೋಮು ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಪೋಸ್ಟ್ ಗೆ ತೀವ್ರ ಖಂಡನೆ ವ್ಯಕ್ತಪಡಿಸುತ್ತೇವೆ. ಪ್ರತಿಯೋಬ್ಬರು ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಳ್ಳುತ್ತೇವೆ. ಪೋಸ್ಟ್ ಶೇರ್ ಮಾಡಿದವರನ್ನು ಬಿಟ್ಟು ಪೋಸ್ಟ್ ಮೊದಲು ಹಾಕಿದ್ದವರು ಯಾರು, ಆ ಪೋಸ್ಟ್ ಎಲ್ಲಿಂದ ಬಂದಿತು ಎಂಬ ಮೂಲ ಪತ್ತೆಗೆ ಪೊಲೀಸರು ಹುಡುಕಾಟ ಆರಂಭಿಸಬೇಕು ಎಂದು ಆಗ್ರಹಿಸಿದ್ದಾರೆ.
ಇನ್ನು ಇಸ್ಲಾಂ ಧರ್ಮಗುರು ಮಹಮದ್ ಪೈಗಂಬರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳಕಾರಿ ಪೋಸ್ಟ್ ಮಾಡಲಾಗಿದೆ ಎಂದು ನಿನ್ನೆ ರಾತ್ರಿ ಪುಂಡು ಪುಂಡಾಟ ನಡೆಸಿದ್ದರು. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದರು.








