ನವದೆಹಲಿ : ನಿರ್ಭಯಾ ಪ್ರಕರಣದ ದೋಷಿ ಪವನ್ ಗುಪ್ತ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಿರಸ್ಕರಿಸಿದ್ದಾರೆ. ನಿರ್ಭಯಾ ಪ್ರಕರಣದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ನಾಲ್ವರು ದೋಷಿಗಳು ಗಲ್ಲುಶಿಕ್ಷೆ ವಿಳಂಬಕ್ಕೆ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ದೋಷಿಗಳ ಪೈಕಿ ಪವನ್ ಕುಮಾರ್ ಗುಪ್ತ ಕ್ಷಮಾದಾನ ಕೋರಿ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸಿದ್ದ. ಇದನ್ನು ರಾಷ್ಟ್ರಪತಿಗಳು ಇಂದು ತಿರಸ್ಕರಿಸಿದ್ದಾರೆ. ರಾಷ್ಟ್ರಪತಿಗಳು ದೋಷಿಗಳಾದ ವಿನಯ್ ಕುಮಾರ್, ಅಕ್ಷಯ್ ಠಾಕೂರ್, ಮುಖೇಶ್ ಸಿಂಗ್ ಅವರ ಕ್ಷಮಾದಾನ ಅರ್ಜಿಯನ್ನು ಈಗಾಗಲೇ ವಜಾಗೊಳಿಸಿದ್ದಾರೆ. ಇನ್ನು ನಾಲ್ವರು ಅಪರಾಧಿಗಳ ಎಲ್ಲಾ ಕಾನೂನು ರಹದಾರಿಗಳು ಅಂತ್ಯವಾಗಿದೆ. ಅಲ್ಲದೆ ಮುಂದಿನ ಹದಿನೈದು ದಿನಗಳಲ್ಲಿ ಅವರನ್ನು ಗಲ್ಲಿಗೇರಿಸುವ ಸಾಧ್ಯತೆ ಇದೆ.
ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!
ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...








