ಕೇಂದ್ರ ಆಯುಷ್ ರಾಜ್ಯ ಸಚಿವ ಶ್ರೀಪಾದ್ ನಾಯ್ಕ್ ಗೆ ಕೊರೋನಾ ಸೋಂಕು
ಹೊಸದಿಲ್ಲಿ, ಅಗಸ್ಟ್ 13: ಕೇಂದ್ರ ಆಯುಷ್ ರಾಜ್ಯ ಸಚಿವ ಶ್ರೀಪಾದ್ ನಾಯ್ಕ್ ಅವರಿಗೆ ಕೊರೋನವೈರಸ್ ಸೋಂಕು ದೃಢಪಟ್ಟಿದೆ. ಕೇಂದ್ರ ಸಚಿವರ ಸ್ವ್ಯಾಬ್ ಮಾದರಿಯಲ್ಲಿ ಅವರಿಗೆ ಕೊರೋನಾ ಸೋಂಕು ತಗುಲಿರುವುದು ಪತ್ತೆಯಾಗಿದೆ.
ನಾಯಕ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ತಮಗೆ ಕೋವಿಡ್-19 ಸೋಂಕು ತಗುಲಿರುವುದರ ಬಗ್ಗೆ ಬಹಿರಂಗಪಡಿಸಿದ್ದಾರೆ. ಅವರು ನನಗೆ ಯಾವುದೇ ಕೊರೋನಾ ಸೋಂಕಿನ ಲಕ್ಷಣಗಳು ಇರಲಿಲ್ಲ. ಆದರೂ ಕೊವಿಡ್-19 ಪರೀಕ್ಷೆ ಮಾಡಿಸಿಕೊಂಡೆ. ಫಲಿತಾಂಶ ಪಾಸಿಟಿವ್ ಬಂದಿದ್ದು, ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೊವಿಡ್-19 ತಪಾಸಣೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.