ಬೆಂಗಳೂರು : ನಗರದ ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅಖಂಡ ಶ್ರೀನಿವಾಸ್ ಮತ್ತು ಕುಟುಂಬಕ್ಕೆ ಸರ್ಕಾರ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಿದೆ.
ಗಲಭೆ ಹಿನ್ನೆಲೆ ಶಾಸಕರ ಕುಟುಂಬ ಸದ್ಯ ಖಾಸಗಿ ಹೋಟೆಲ್ ನಲ್ಲಿ ವಾಸವಿದ್ದು, ಪೊಲೀಸರು ಭದ್ರತೆ ನೀಡಿದ್ದಾರೆ. ಅಲ್ಲದೆ ಸದ್ಯಕ್ಕೆ ತಮ್ಮ ನಿವಾಸಕ್ಕೆ ಹೋಗೋದು ಬೇಡ ಅಂತ ಪೊಲೀಸರು ತಿಳಿಸಿದ್ದಾರೆ. ಹೀಗಾಗಿ ಸ್ವಲ್ಪ ದಿನ ಹೊಟೇಲ್ ನಲ್ಲಿ ಉಳಿಯಲು ಶಾಸಕರ ಕುಟುಂಬ ನಿರ್ಧಾರ ಮಾಡಿದೆ
ಇನ್ನು ಗಲಭೆಗೆ ಸಂಬಂಧಿಸಿದಂತೆ ಅಲೋಕ್ ಕುಮಾರ್ ಕೆಜೆ ಹಳ್ಳಿ ಪೊಲೀಸ್ ಠಾಣೆಗೆ ಬುಧವಾರ ಭೇಟಿ ನೀಡಿದ್ದಾರೆ. ಕೆಜೆ ಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಾದ ಹಾನಿಯ ಬಗ್ಗೆ ಇಂಚಿಂಚು ಮಾಹಿತಿ ಸಂಗ್ರಹಿಸಿದ್ದಾರೆ. ಸದ್ಯ ಕೆಜೆ ಹಳ್ಳಿ, ಡಿಜೆ ಹಳ್ಳಿ ಸುತ್ತ 50 ಕೆಎಸ್ ಆರ್ಪಿ ತುಕಡಿ ನಿಯೋಜಿಸಲಾಗಿದೆ. ಸಂಪೂರ್ಣ ಭದ್ರತೆ ಕಲ್ಪಿಸಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ.