ಡಿಜೆ ಹಳ್ಳಿ ಹಿಂಸಾಚಾರ ಪ್ರಕರಣ ಸಂಬಂಧ ಕಾನೂನು ಸುವ್ಯವಸ್ಥೆ ಹೇಗಿದೆ ಎಂಬುದರ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ತಮ್ಮ ನಿವಾಸದಲ್ಲೇ ಮಾಹಿತಿ ಸಂಘ್ರಹಿಸುತ್ತಿದ್ದಾರೆ. ಪೊಲೀಸ್ ಅಧಿಕಾರಿಗಳಿಂದ ಕ್ಷಣ ಕ್ಷಣದ ಅಪ್ಡೇಟ್ ಪಡೆಯುತ್ತಿರುವ ಬಸವರಾಜ ಬೊಮ್ಮಾಯಿ ಅವರು ಸೂಕ್ಷ್ಮ ಪ್ರದೇಶಗಳಲ್ಲಿ ಎಚ್ಚರಿಕೆವಹಿಸುವಂತೆ ಸೂಚಿಸಿದ್ದಾರೆ. ಇನ್ನೂ ಇಂದು ಬೆಳಗ್ಗೆ ಭೇಟಿ ನಿರ್ಮಲ್ ಕುಮಾರ್ ಸುರಾನಾ ಅವರು ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದರು. ಬಳಿಕ ಬಿಜೆಪಿ ಮುಖಂಡ ಅಬ್ದುಲ್ ಅಜೀಜ್ ಅವರು ಗೃಹ ಸಚಿವರನ್ನು ಭೇಟಿಯಾಗಿದ್ದರು.
ಬೆಂಗಳೂರಿನ ಆರ್‌ಟಿ ನಗರದಲ್ಲಿರುವ ಬೊಮ್ಮಾಯಿ ಅವರ ನಿವಾಸಕ್ಕೆ ಅನೇಕ ಬಿಜೆಪಿ ಮುಖಂಡರು ಭೇಟಿ ನೀಡುತ್ತಿದ್ದಾರೆ. ಇನ್ನೂ ಸಿಎಂ ರಾಜಕೀಯ ಕಾರ್ಯದರ್ಶಿ ವಿಶ್ವನಾಥ್, ವೈಎ ನಾರಾಯಣಸ್ವಾಮಿ, ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಭೇಟಿ ನೀಡಿ ಪ್ರಕರಣ ಸಂಬಂಧ ಮಾಹಿತಿ ನೀಡಿದ್ದಾರೆ.








