ಪುಲ್ವಾಮಾ – ಭಯೋತ್ಪಾದಕ ಅಡಗುತಾಣ ಪತ್ತೆ – ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
ಅವಂತಿಪೋರಾ, ಅಗಸ್ಟ್ 13: ಸ್ವಾತಂತ್ರ್ಯ ದಿನಾಚರಣೆಗೆ ಕೇವಲ ಎರಡು ದಿನಗಳ ಮೊದಲು, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೊರಾದಲ್ಲಿ ಗುರುವಾರ (ಆಗಸ್ಟ್ 13) ನಡೆದ ಶೋಧ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕ ಅಡಗುತಾಣವನ್ನು ಪತ್ತೆ ಹಚ್ಚಿದೆ.
ಅವಂತಿಪೋರಾದ ಬಾರ್ಸೋ ಗ್ರಾಮದಲ್ಲಿ ಶೋಧ ಕಾರ್ಯಾಚರಣೆಯಲ್ಲಿ ಭಯೋತ್ಪಾದಕ ಅಡಗುತಾಣವನ್ನು ಭದ್ರತಾ ಪಡೆಗಳು ಭೇದಿಸಿವೆ. ಪೊಲೀಸ್ ಅಧಿಕಾರಿಯೊಬ್ಬರು ಜಮ್ಮು ಕಾಶ್ಮೀರ ಪೊಲೀಸ್ ಮತ್ತು ಸೇನೆಯ ಜಂಟಿ ತಂಡದಿಂದ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಬಾರ್ಸೋದ ಅರಣ್ಯ ಪ್ರದೇಶದಲ್ಲಿ ನಿಷೇಧಿತ ಲಷ್ಕರ್-ಎ-ತೈಬಾದ ಭಯೋತ್ಪಾದಕರು ಇರುವ ಬಗ್ಗೆ ನಂಬಲರ್ಹವಾದ ಮಾಹಿತಿಯ ಆಧಾರದ ಮೇಲೆ, ಅವಂತಿಪೋರಾ ಪೊಲೀಸರು 50 ಆರ್ಆರ್ ಮತ್ತು 130 ಬಿಎನ್ ಸಿಆರ್ಪಿಎಫ್ ಜೊತೆಗೆ ಈ ಅರಣ್ಯ ಪ್ರದೇಶದಲ್ಲಿ ಶೋಧ ನಡೆಸಿದರು.
ಶೋಧ ಕಾರ್ಯಾಚರಣೆಯಲ್ಲಿ ಎಕೆ 47 ಗನ್ ನ ರೌಂಡ್ಸ್ ಗಳು, ಗ್ರೆನೇಡ್ಸ್ ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಅಡಗುತಾಣದಿಂದ ವಶಕ್ಕೆ ಪಡೆಯಲಾಗಿದೆ ಎಂದು ವರದಿಗಳು ತಿಳಿಸಿವೆ.