ಭಾರತದ ಮೇಲೆ ಅಪಾರ ಪ್ರೀತಿ ಹೊಂದಿರುವ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಜಾಂಟಿ ರೋಡ್ಸ್ ರಿಷಿಕೇಷದ ಪವಿತ್ರ ಗಂಗಾ ನದಿಯಲ್ಲಿ ಸ್ನಾನ ಮಾಡಿದ್ದಾರೆ. ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಗಂಗೆಯಲ್ಲಿ ಸ್ನಾನ ಮಾಡುತ್ತಾ ನಮಸ್ಕರಿಸುತ್ತಿರುವ ಫೋಟೋವನ್ನು ಟ್ವೀಟ್ ಮಾಡಿರುವ ಜಾಂಟಿ ರೋಡ್ಸ್ ಗಂಗಾ ನದಿಯ ಕೊರೆಯುವ ನೀರಿನಲ್ಲಿ ಮುಳುಗೇಳುವುದರಿಂದ ದೈಹಿಕ ಮತ್ತು ಆಧ್ಯಾತ್ಮಿಕ ಶಕ್ತಿ ವೃದ್ಧಿಗೆ ಪ್ರಯೋಜನವಾಗಲಿದೆ ಎಂದು ಬರೆದುಕೊಂಡಿದ್ದಾರೆ.

ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಜಾಂಟಿ ರೋಡ್ಸ್, ಭಾರತದ ಮೇಲಿನ ಅಪಾರವಾದ ಪ್ರೀತಿಯನ್ನು ತಮ್ಮ ಮಗಳಿಗೆ ಇಂಡಿಯಾ ಎಂದು ಹೆಸರಿಡುವ ಮೂಲಕ ವ್ಯಕ್ತಪಡಿಸಿದ್ದರು.
ಜಾಂಟಿ ರೋಡ್ಸ್ ಟ್ವೀಟ್ ಗೆ ರೀಟ್ವೀಟ್ ಮಾಡಿರುವ ಮಾಜಿ ಕ್ರಿಕೆಟಿಗ, ಹರ್ಭಜನ್ ಸಿಂಗ್ ‘ ನೀವು ನನಗಿಂತ ಹೆಚ್ಚು ಭಾರತವನ್ನು ನೋಡಿದ್ದೀರಿ ಗೆಳೆಯ. ನೀವು ಪವಿತ್ರ ಗಂಗಾದಲ್ಲಿ ಆನಂದಿಸುತ್ತಿರುವುದನ್ನು ನೋಡುವುದಕ್ಕೆ ಆನಂದವಾಗುತ್ತದೆ. ಇನ್ನೊಮ್ಮೆ ಗಂಗೆಯಲ್ಲಿ ಸ್ನಾನ ಮಾಡಲು ಹೋದಾಗ ನನ್ನನ್ನು ಕರೆದುಕೊಂಡು ಹೋಗಿ’ ಎಂದು ಬರೆದಿದ್ದಾರೆ.
ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ
ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ ಭಾರತಕ್ಕೆ ಜಾಗತಿಕ ಹಣಕಾಸು ಮತ್ತು ಭದ್ರತಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಸಾಧನೆ ದೊರೆತಿದ್ದು,...








