ದಿನೇ ದಿನೇ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿರುವ ಸುಶಾಂತ್ ಸಾವಿನ ಪ್ರಕರಣಕ್ಕೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಸುಶಾಂತ್ ಅವರ ಸಾವು ಆತ್ಮಹತ್ಯೆಯಲ್ಲ, ಇದು ಪೂರ್ವ ನಿಯೋಜಿತ ಕೊಲೆ ಎಂದು ಕುಟುಂಬಸ್ಥರು ಹಾಗೂ ಅಭಿಮಾನಿಗಳು ವಾದಿಸುತ್ತಿದ್ದಾರೆ. ಇದೀಗ, ಸುಶಾಂತ್ ಪ್ರಕರಣದಲ್ಲಿ ಸ್ಟನ್ ಗನ್ ಬಳಕೆ ಮಾಡಲಾಗಿದ್ಯಾ ಎಂಬ ಹೊಸ ಅನುಮಾನ ವ್ಯಕ್ತವಾಗಿದೆ. ಸ್ಟನ್ ಗನ್ ಬಳಸಿ ಸುಶಾಂತ್ ಅವರನ್ನು ಕೊಲೆ ಮಾಡಲಾಗಿದೆ ಎಂದು ನೆಟ್ಟಿಗರು ತೀವ್ರವಾಗಿ ವಾದಿಸುತ್ತಿದ್ದಾರೆ. ಈ ಹಿಂದೆ ಸುಶಾಂತ್ ರದ್ದು ಆತ್ಮಹತ್ಯೆಯಲ್ಲ ಕೊಲೆ ಎಂದು ಆರೋಪಿಸಿ ಅದಕ್ಕೆ 26 ಕಾರಣಗಳನ್ನು ನೀಡಿದ್ದ ಸುಬ್ರಮಣಿಯನ್ ಸ್ವಾಮಿ ಅವರು ಈಗ ಕೊಲೆ ಮಾಡಲು ಸ್ಟನ್ ಗನ್ ಬಳಕೆ ಮಾಡಲಾಗಿದೆ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ.
ಹೌದು ಈ ಅನುಮಾನಕ್ಕೆ ಕಾರಣವೂ ಇದೆ. ನೆಟ್ಟಿಗನೊಬ್ಬ ಸುಶಾಂತ್ ಪ್ರಕರಣ ಸಂಬಂಧ ಟ್ವಿಟ್ಟರ್ ನಲ್ಲಿ ಪೋಸ್ಟ್ ಒಂದನ್ನ ಹಾಕಿದ್ದರು. ಆ ಪೋಸ್ಟ್ ನಲ್ಲಿ ಸುಶಾಂತ್ ಸಿಂಗ್ ಅವರ ಕತ್ತಿನ ಮೇಲೆ ಇರುವ ಗಾಯದ ಗುರುತನ್ನು ಸೂಕ್ಷ್ಮವಾಗಿ ಗಮನಿಸಿದರೆ ಸ್ಟನ್ ಗನ್ ಗೆ ಹೋಲಿಕೆಯಾಗುತ್ತಿದೆ ಎಂದು ಶೇರ್ ಮಾಡಿ ಫೋಟೋ ಹಂಚಿಕೊಂಡಿದ್ದರು. ಹಂಚಿಕೊಂಡಿದ್ದಾನೆ. ಈ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಸುಬ್ರಮಣಿಯನ್ ಸ್ವಾಮಿ ಅವರು ”ಈ ಗನ್ನ್ನು ಯಾವುದಾದರೂ ದೇಶದಿಂದ ಕಳ್ಳಸಾಗಣೆ ಮಾಡಲಾಗಿದೆಯೇ? ಈ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ ತನಿಖೆ ಮಾಡಲಿ’ ಎಂದು ಆಗ್ರಹಿಸಿದ್ದಾರೆ.
ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!
ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...








